ಐಪಿಎಲ್ 2019: ಕಡೇ ಆಟವನ್ನು ಗೆದ್ದ ಆರ್‌ಸಿಬಿ, ಹೈದರಾಬಾದ್ ವಿರುದ್ಧ 4 ವಿಕೆಟ್ ಜಯ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ೨೦೧೯ ಸಾಲಿನ ಶನಿವಾರದ ಎರಡನೇ ಪಂದ್ಯದಲ್ಲಿ ತವರು ನೆಲದಲ್ಲಿ ನಡೆದ ಕಡೆಯ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್....

Published On :
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)2019 ಸಾಲಿನ ಶನಿವಾರದ ಎರಡನೇ ಪಂದ್ಯದಲ್ಲಿ ತವರು ನೆಲದಲ್ಲಿ ನಡೆದ ಕಡೆಯ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 4 ವಿಕೆಟ್ ಅಂತರದ ಭರ್ಜರಿ ಜಯ ಸಾಧಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಈ ವೇಳೆ ಮೊದಲು ಬ್ಯಾಟಿಂಗ್ ಪಡೆದ ಸನ್‌ರೈಸರ್ಸ್ ಹೈದರಾಬಾದ್ ನಾಯಕ ಕೇನ್ ವಿಲಿಯಮ್ಸನ್ (70*) ನೆರವಿನೊಡನೆ ನಿಗದಿತ ಇಪ್ಪತ್ತು ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 175 ರನ್ ಕಲೆ ಹಾಕಿತ್ತು.
ಪ್ರಾರಭಿಕರಾಗಿದ್ದ ವೃದ್ದಿಮಾನ್ ಸಹಾ(20) ಹಾಗೂ ಮಾರ್ಟಿನ್ ಗಪ್ಟಿಲ್ (30) ರನ್ ಗಳಿಸಿದ್ದರೆ ಮನ್ಬೀಶ್ ಪಾಂಡೆ ಕೇವಲ 9 ರನ್ ಗಳಿಸಿ ಔಟಾಗಿದ್ದರು. ಆ ಬಳಿಕ ಬಂದ ವಿಜಯ ಶಂಕರ್ 18 ಎಸೆತದಲ್ಲಿ 27 ರನ್ ಗಳಿಸಿದ್ದು ಹೊರತುಪಡಿಸಿದರೆ ಇನ್ನಾರೂ ಎರಡಂಕಿ ತಲುಪಲಿಲ್ಲ. ಹಾಗಾಗಿ ಹೈದರಾಬಾದ್ ಪರ ವಿಲಿಯಮ್ಸನ್ ಒಬ್ಬರೇ ಶ್ರೇಷ್ಠ ಪ್ರದರ್ಶನ ತೋರಿ ತಂಡದ ಮೊತ್ತ 150ರ ಗಡಿ ದಾಟಲು ನೆರವಾಗಿದ್ದರು.
ಹೈದರಾಬಾದ್ ನೀಡಿದ್ದ ಈ ಗುರಿಯನ್ನು ಬೆನ್ನತ್ತಿದ ವಿರಾಟ್ ಕೊಹ್ಲಿ ಬಳಗದಲ್ಲಿಯೂ ಪ್ರಾರಂಭದಲ್ಲಿ ಗಟ್ಟಿ ಸವಾಲೊಡ್ಡಲು ಸಾಧ್ಯವಾಗಿರಲಿಲ್ಲ. ಪಾರ್ಥಿವ್ ಪಟೇಲ್ ಖಾತೆ ತೆರೆಯದೇ ಶೂನ್ಯಕ್ಕೆ ಔಟಾಗಿದ್ದರೆ ನಾಯಕ ಕೊಹ್ಲಿ 1 ಬೌಂಡರಿ, 2 ಸಿಕ್ಸರ್ ನೊಡನೆ 7 ಎಸೆತಗಳಲ್ಲಿ 16 ರನ್ ಗಳಿಸಿದ್ದರು.
ಇನ್ನ್ಯು ಬಹು ನಿರೀಕ್ಷಿತ ಬ್ಯಾಟ್ಸ್ ಮನ್ ಎಬಿ ಡೆವಿಲ್ಲಿಯರ್ಸ್ ಸಹ 2 ಎಸೆತದಲ್ಲಿ ಕೇವಲ ಒಂದು ರನ್ ಗಳಿಸಿ ಪೆವಿಲಿಯನ್ ಹಾದಿ ಹಿಡಿದರು. ಆದರೆ ಆ ಬಳಿಕ ಜತೆಯಾದ ಶಿಮ್ರಾನ್ ಹೆಟ್ಮಾಯೆರ್ ಹಾಗೂ ಗುರ್‌ಕೀರಾತ್ ಸಿಂಗ್ ಮನ್ ತಂಡವನ್ನು ಗೆಲುವಿನ ಹಾದಿಗೆ ಮರಳಿಸಿದ್ದಾರೆ.
ಹೆಟ್ಮಾಯೆರ್ 6 ಸಿಕ್ಸರ್ 4 ಬೌಂಡರಿಗಳೊಡನೆ 47 ಎಸೆತಕ್ಕೆ 75 ರನ್ ಗಳಿಸಿದ್ದರೆ ಗುರ್‌ಕೀರಾತ್ ಸಿಂಗ್ ಮನ್ 1 ಸಿಕ್ಸರ್ 8 ಬೌಂಡರಿ ಗಳೊಡನೆ 48 ಎಸೆತದಲ್ಲಿ 65 ರನ್ ಕಲೆ ಹಾಕಿದರು.
ಈ ಇಬ್ಬರ ನಿರ್ಗಮದ ವೇಳೆಗೆ ಬೆಂಗಳೂರಿಗೆ ಗೆಲುವು ಪಕ್ಕಾ ಆಗಿತ್ತು. ಇದಾಗಿಯೂ ಅಂತಿಮಸುತ್ತಿನ್ಬಲ್ಲಿ ಕ್ರೀಸ್ ಗಿಳಿದ ಉಮೇಶ್ ಯಾದವ್,ಹಾಗೂ ಕಾಲಿನ್ ಕ್ರಮವಾಗಿ 9 ಹಾಗೂ 3 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


