'ಧೋನಿಯನ್ನು ಭಯೋತ್ಪಾದಕ ಎನ್ನುತ್ತಿದ್ದೆವು'!
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಅವರು ತಮ್ಮ ಸ್ನೇಹಿತರೊಂದಿಗೆ ಅತ್ಯುತ್ತಮ ಸಂಬಂಧ ಹೊಂದಿರುವುದು ಎಲ್ಲರಿಗೂ ಗೊತ್ತೇ ಇದೆ.

Published On :
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಅವರು ತಮ್ಮ ಸ್ನೇಹಿತರೊಂದಿಗೆ ಅತ್ಯುತ್ತಮ ಸಂಬಂಧ ಹೊಂದಿರುವುದು ಎಲ್ಲರಿಗೂ ಗೊತ್ತೇ ಇದೆ. 2000 ರಲ್ಲಿ ಬಿಹಾರ ತಂಡವನ್ನು ಪ್ರತಿನಿಧಿಸುತ್ತಿದ್ದಾಗಿನಿಂದಲೂ ಅವರು ಸ್ನೇಹಿತರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.
ಇತ್ತೀಚೆಗೆ ಧೋನಿ ಕುರಿತ ವಿಶೇಷ, ಆಸಕ್ತಿದಾಯಕ ಅಂಶವೊಂದನ್ನು ಅವರ ಬಿಹಾರ ಟೀಂ ಮೇಟ್ ಸತ್ಯಪ್ರಕಾಶ್ ಹಂಚಿಕೊಂಡಿದ್ದಾರೆ.
ಧೋನಿಯನ್ನು ನಾವು ಟೆರರಿಸ್ಟ್ ಆತಂಕವಾದಿ ಎಂದು ಕರೆಯುತ್ತಿದ್ದೆವು ಎಂದು ಖರಗ್ಪುರ ಪ್ರೀಮಿಯರ್ ಲೀಗ್ (ಕೆಪಿಎಲ್) ನ ಪಂದ್ಯದಲ್ಲಿ ಆಡುತ್ತಿರುವ ಧೋನಿಯ ಸ್ನೇಹಿತ ಸತ್ಯಪ್ರಕಾಶ್ ಹಳೆಯ ನೆನಪುಗಳನ್ನು ಹಂಚಿಕೊಂಡಿದ್ದಾರೆ.
20 ಎಸೆತಗಳಲ್ಲಿ ಧೋನಿ 40-50 ರನ್ ಗಳನ್ನು ಗಳಿಸುತ್ತಿದ್ದರು. ಆದರೆ ಟೀಂ ಇಂಡಿಯಾಗೆ ಆಯ್ಕೆಯಾದ ಬಳಿಕ ತಮ್ಮ ವಿಧಾನವನ್ನು ಬದಲಾವಣೆ ಮಾಡಿಕೊಂಡರು. ಧೋನಿ ಓರ್ವ ಗುಡ್ ಲರ್ನರ್ (good learner) ಎಂದು ಸತ್ಯಪ್ರಕಾಶ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


