ಕ್ರಿಕೆಟ್

ವಿಶ್ವಕಪ್ 2019: ಮೊದಲ ಅಭ್ಯಾಸ ಪಂದ್ಯದಲ್ಲೇ ಮುಗ್ಗರಿಸಿದ ಟೀಂ ಇಂಡಿಯಾ

ಐಸಿಸಿ ವಿಶ್ವಕಪ್ ಗೆ ಮುನ್ನ ಶನಿವಾರ ಓವಲ್ ಅಂಗಳದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಅಭ್ಯಾಸ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ...

ವಿಶ್ವಕಪ್ 2019: ಮೊದಲ ಅಭ್ಯಾಸ ಪಂದ್ಯದಲ್ಲೇ ಮುಗ್ಗರಿಸಿದ ಟೀಂ ಇಂಡಿಯಾ
ವಿರಾಟ್ ಕೊಹ್ಲಿ
Published On :
ಲಂಡನ್: ಐಸಿಸಿ ವಿಶ್ವಕಪ್ ಗೆ ಮುನ್ನ ಶನಿವಾರ ಓವಲ್ ಅಂಗಳದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಅಭ್ಯಾಸ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಹೀನಾಯ ಸೋಲು ಅನುಭವಿಸಿದೆ.
ಇಂದು ಕೆನ್ನಿಂಗ್ಟನ್ ಓವಲ್‌ನಲ್ಲಿ ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತ ವಿರುದ್ಧ ನ್ಯೂಜಿಲೆಂಡ್ ಆರು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ, ರವೀಂದ್ರ ಜಡೇಜಾ ಅರ್ಧಶತಕದ (54) ಹೊರತಾಗಿಯೂ 179 ರನ್‌ಗಳಿಗೆ ಸರ್ವಪತನ ಕಂಡಿತ್ತು. ಬಳಿಕ ಗುರಿ ಬೆನ್ನಟ್ಟಿದ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ (67) ಹಾಗೂ ರಾಸ್ ಟೇಲರ್ (71) ಅರ್ಧಶತಕದ ನೆರವಿನಿಂದ ನಾಲ್ಕು ವಿಕೆಟ್ ನಷ್ಟಕ್ಕೆ ಗೆಲುವಿನ ಗುರಿ ತಲುಪಿತು.
ಅಭ್ಯಾಸ ಪಂದ್ಯದ ಸೋಲಿನ ಬಳಿಕ ಟೀಂ ಇಂಡಿಯಾ ತನ್ನಲ್ಲಿನ ಹಲವು ನ್ಯೂನತೆಗಳನ್ನು ಹುಡುಕಿ ಸರಿಪಡಿಸಿಕೊಳ್ಳುವ ಅನಿವಾರ್ಯತೆ ಎದುರಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.