ಬಾಲಿವುಡ್ ನಟಿ ಕರೀನಾ ಕಪೂರ್ ರಿಂದ ಐಸಿಸಿ ಮಹಿಳಾ ಟಿ 20 ವಿಶ್ವಕಪ್ ಟ್ರೋಫಿ ಅನಾವರಣ
ಬಾಲಿವುಡ್ ಸ್ಟಾರ್ ನಟಿ ಕರೀನಾ ಕಪೂರ್ ಕಾನ್ ಮೆಲ್ಬೋರ್ನ್ ನಲ್ಲಿ ಐಸಿಸಿ ಮಹಿಳಾ ಟಿ 20 ವಿಶ್ವಕಪ್ ಟ್ರೋಫಿಯನ್ನು ಅನಾವರಣಗೊಳಿಸಿದರು.

ಬಾಲಿವುಡ್ ಸ್ಟಾರ್ ನಟಿ ಕರೀನಾ ಕಪೂರ್ ಕಾನ್ ಮೆಲ್ಬೋರ್ನ್ ನಲ್ಲಿ ಐಸಿಸಿ ಮಹಿಳಾ ಟಿ 20 ವಿಶ್ವಕಪ್ ಟ್ರೋಫಿಯನ್ನು ಅನಾವರಣಗೊಳಿಸಿದರು.
"ಬಾಲಿವುಡ್ ತಾರೆ ಕರೀನಾ ಕಪೂರ್ ಐಸಿಸಿ ಮಹಿಳಾ ಟಿ 20 ಕಪ್ ಗಾಗಿ ಕಾಯುತ್ತಿದ್ದಾರೆ.ಅಂತರರಾಷ್ಟ್ರೀಯ ಮಹಿಳಾ ದಿನದಂದು ನಡೆಯುವ ಫೈನಲ್ಸ್ ನಲ್ಲಿ ಎಂಸಿಜಿಯನ್ನು ತುಂಬಲು ಯಾರು ತನ್ನೊಡನೆ ಸೇರಿಕೊಳ್ಲಲಿದ್ದಾರೆ ಎಂದು ಅವರು ಕಾತುರದಿಂಡ ಎದುರು ನೋಡುತ್ತಿದ್ದಾರೆ" ಐಸಿಸಿ ಟ್ವೀಟ್ ಮಾಡಿದೆ.
ವಿಶ್ವ ಮಹಿಳಾ ಟಿ 20 ಫೆಬ್ರವರಿ 21, 2020 ರಂದು ಪ್ರಾರಂಭವಾಗಲಿದೆ. ಇಸಕ್ಕಾಗಿ ಸ್ಕಾಟ್ಲೆಂಡ್ ನಲ್ಲಿ ನಡೆದ ಅರ್ಹತಾ ಪಂದ್ಯದಲ್ಲಿ ಬಾಂಗ್ಲಾದೇಶ ಜಯ ಸಾಧಿಸಿದ್ದು ಇದರ ಪರಿಣಾಮ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ, ಭಾರತ, ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ತಂಡಗಳೊಂದಿಗೆ ಎ ಗುಂಪಿನಲ್ಲಿ ಬಾಂಗ್ಲಾ ಸಹ ಸ್ಥಾನ ಗಿಟ್ಟಿಸಿದೆ.. ಫೆಬ್ರವರಿ 27 ರಂದು ನಡೆಯಲಿರುವ ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾವನ್ನು ಎದುರಿಸಲಿದೆ.
ಇನ್ನೊಂದೆಡೆ 12 ವರ್ಷಗಳ ಹಿಂದೆ ತಮ್ಮ ಮೊದಲ ಮಹಿಳಾ ಅಂತರರಾಷ್ಟ್ರೀಯ ಪಂದ್ಯವನ್ನು ಆಡಿದ ಥೈಲ್ಯಾಂಡ್, ಪಂದ್ಯಾವಳಿಗೆ ಅರ್ಹತೆ ಪಡೆಯುವ ಮೂಲಕ ಇತಿಹಾಸ ಬರೆದಿದೆ. ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್, ಮತ್ತು ಪಾಕಿಸ್ತಾನದೊಡನೆ ಗೆ ಬಿ ಗುಂಪಿನಲ್ಲಿ ಥೈಲ್ಯಾಂಡ್ ಸೇರ್ಪಡೆಯಾಗಿದೆ.ಫೆಬ್ರವರಿ 22, 2020 ರಂದು ತಮ್ಮ ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೆಣಸಲಿದ್ದಾರೆ.
ಫೆಬ್ರವರಿ 21 ರಂದು ನಡೆಯಲಿರುವ ವಿಶ್ವಕಪ್‌ನ ಆರಂಭಿಕ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಭಾರತ ಉದ್ಘಾಟನಾ ಪಂದ್ಯವನ್ನಾಡಲಿದೆ.
ಪಂದ್ಯಾವಳಿಯ ಅಂತಿಮ ಪಂದ್ಯವನ್ನು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ (ಎಂಸಿಜಿ) ಆಡಲಾಗುವುದು, ಮಾರ್ಚ್ 8 ಅಂತರಾಷ್ಟ್ರೀಯ ಮಹಿಳಾ ದಿನದ್ಂಅದು ಈ ಪಂದ್ಯ ನಡೆಯುತ್ತಿರುವುದು ಗಮನಾರ್ಹ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


