ಕ್ರಿಕೆಟ್

ಸ್ಪರ್ಧಾತ್ಮಕ ಮೊತ್ತ ಕಾಪಾಡಿಕೊಳ್ಳುವಲ್ಲಿ ವಿಫಲರಾಗಿದ್ದೇವೆ: ರೋಹಿತ್ ಶರ್ಮಾ

ಬಾಂಗ್ಲಾ ವಿರುದ್ಧ ಸ್ಪರ್ಧಾತ್ಮಕ ಮೊತ್ತವನ್ನು ಪೇರಿಸುವುದರಲ್ಲಿ ತಂಡ ಎಡವಿದೆ ಎಂದು ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.

ಸ್ಪರ್ಧಾತ್ಮಕ ಮೊತ್ತ ಕಾಪಾಡಿಕೊಳ್ಳುವಲ್ಲಿ ವಿಫಲರಾಗಿದ್ದೇವೆ: ರೋಹಿತ್ ಶರ್ಮಾ
ರೋಹಿತ್ ಶರ್ಮಾ
Published On :

ನವದೆಹಲಿ: ಬಾಂಗ್ಲಾ ವಿರುದ್ಧ ಸ್ಪರ್ಧಾತ್ಮಕ ಮೊತ್ತವನ್ನು ಪೇರಿಸುವುದರಲ್ಲಿ ತಂಡ ಎಡವಿದೆ ಎಂದು ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ. 

ಅರುಣ್ ಜೇಟ್ಲಿ ಅಂಗಳದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಬಾಂಗ್ಲಾ ಇದೇ ಮೊದಲ ಬಾರಿಗೆ ಭಾರತ ವಿರುದ್ಧ ಟಿ-20 ಪಂದ್ಯ ಗೆದ್ದು ಬೀಗಿತ್ತು. 

ಪಂದ್ಯ ಮುಗಿದ ನಂತರ ಮಾತನಾಡಿದ ರೋಹಿತ್ ಶರ್ಮಾ ಅವರು, ನಾವು ಉತ್ತಮವಾಗಿ ಆಡಿದರೂ ಉತ್ತಮ ರನ್ ಕಲೆಹಾಕುವುದರಲ್ಲಿ ಎಡವಿದ್ದೇವೆ. ಇನ್ನು ಬ್ಯಾಟ್ಸ್ ಮನ್ ಗಳು ಉತ್ತಮ ರನ್ ಕಲೆ ಹಾಕುವುದರಲ್ಲಿ ಸೋತ್ತಿದ್ದಾರೆ ಎಂದರು.

ಮೊದಲು ಬ್ಯಾಟ್ ಮಾಡಿದ ಆತಿಥೇಯ ತಂಡ 20 ಓವರ್ ಗಳಲ್ಲಿ 6 ವಿಕೆಟ್ ಗೆ 148 ರನ್ ಕಲೆ ಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಬಾಂಗ್ಲಾ ಇನ್ನೂ ಮೂರು ಎಸೆತ ಬಾಕಿ ಇರುವಂತೆ 3 ವಿಕೆಟ್ ಕಳೆದು ಕೊಂಡು 154 ರನ್ ಪೇರಿಸಿ ಗೆಲುವಿನ ನಗೆ ಬೀರಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.