ನಿರೂಪಕರಾಗಿ ಹೊಸ ಇನ್ನಿಂಗ್ಸ್ ಆರಂಭಿಸಲಿದ್ದಾರೆಯೇ ಎಂ ಎಸ್ ಧೋನಿ?
ಭಾರತ ಕ್ರಿಕೆಟ್ ತಂಡದ ಆಟಗಾರ, ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ನಿರೂಪಕರಾಗಿ ಹೊಸ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ.

ನವದೆಹಲಿ: ಭಾರತ ಕ್ರಿಕೆಟ್ ತಂಡದ ಆಟಗಾರ, ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ನಿರೂಪಕರಾಗಿ ಹೊಸ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ.
ಕ್ರಿಕೆಟ್ ಪ್ರಸಾರಕರು ಈ ಬಗ್ಗೆ ಪ್ರಸ್ತಾವನೆ ಕಳುಹಿಸಿದ್ದು ಬಿಸಿಸಿಐಯಿಂದ ಅನುಮತಿ ಸಿಗಬೇಕಿದೆ.
ಪ್ರಸಾರಕರು ಪ್ರಸ್ತಾವನೆ ಕಳುಹಿಸಿದ್ದು ಸದ್ಯ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಬಿಸಿಸಿಐ ಅನುಮತಿ ಕೊಟ್ಟರೆ ಧೋನಿಯವರು ಈಡನ್ ಗಾರ್ಡನ್ ನಲ್ಲಿ ನಡೆಯಲಿರುವ ಹಗಲು-ರಾತ್ರಿ ಟೆಸ್ಟ್ ಪಂದ್ಯದ ನಿರೂಪಕರಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹಗಲು-ರಾತ್ರಿ ಟೆಸ್ಟ್ ಪಂದ್ಯ ಆಡುವಂತೆ ಬಿಸಿಸಿಐ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಅಕ್ಟೋಬರ್ 29ರಂದು ಒಪ್ಪಿಕೊಂಡಿತ್ತು. ಭಾರತ ಮತ್ತು ಬಾಂಗ್ಲಾದೇಶ ನಡುವಣ ಎರಡನೇ ಟೆಸ್ಟ್ ಮ್ಯಾಚ್ ಈಡನ್ ಗಾರ್ಡನ್ ನಲ್ಲಿ ಇದೇ ತಿಂಗಳ 22ರಿಂದ ಆರಂಭವಾಗಲಿದೆ.
ಸದ್ಯ ಭಾರತ ಮತ್ತು ಬಾಂಗ್ಲಾದೇಶ ಟಿ-20 ಮೂರು ಪಂದ್ಯಗಳನ್ನು ಆಡುತ್ತಿವೆ. ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ 7 ವಿಕೆಟ್ ಗಳ ಮುನ್ನಡೆ ಸಾಧಿಸಿ 1-0 ಅಂತರದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


