ವಿಶ್ವ ದಾಖಲೆಯ ವೀರ ದೀಪಕ್ ಚಹಾರ್ ರ್ಯಾಂಕಿಂಗ್ ನಲ್ಲಿ ಏರಿಕೆ!
ಬಾಂಗ್ಲಾದೇಶದ ವಿರುದ್ಧದ ಮೂರನೇ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಅಮೋಘ ಬೌಲಿಂಗ್ ಪ್ರದರ್ಶನ ನೀಡಿ ಗಮನ ಸೆಳೆದ ಟೀಮ್ ಇಂಡಿಯಾದ ಯುವ ವೇಗಿ ದೀಪಕ್ ಚಹಾರ್ ಅವರ ಶ್ರೇಯಾಂಕದಲ್ಲಿ ಏರಿಕೆ ಆಗಿದೆ.

ನವದೆಹಲಿ: ಬಾಂಗ್ಲಾದೇಶದ ವಿರುದ್ಧದ ಮೂರನೇ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಅಮೋಘ ಬೌಲಿಂಗ್ ಪ್ರದರ್ಶನ ನೀಡಿ ಗಮನ ಸೆಳೆದ ಟೀಮ್ ಇಂಡಿಯಾದ ಯುವ ವೇಗಿ ದೀಪಕ್ ಚಹಾರ್ ಅವರ ಶ್ರೇಯಾಂಕದಲ್ಲಿ ಏರಿಕೆ ಆಗಿದೆ.
ನಾಗಪುರನಲ್ಲಿ ನಡೆದ ಪಂದ್ಯದಲ್ಲಿ ಚಹಾರ್ ಅವರು ಏಳು ರನ್ ನೀಡಿ ಆರು ವಿಕೆಟ್ ಕಬಳಿಸಿದ್ದರು. ಅಲ್ಲದೆ ವಿಶ್ವ ದಾಖಲೆ ಬರೆದಿದ್ದರು. ಇವರ ಈ ಪ್ರದರ್ಶನ ಅವರ ಸ್ಥಾನ ಏರಿಕೆಗೆ ಅನುಕೂಲವಾಗಿದೆ. ಚಹಾರ್ 88ನೇ ಸ್ಥಾನದಿಂದ 42ನೇ ಸ್ಥಾನಕ್ಕೆ ಜಿಗಿತ ಕಂಡಿದ್ದಾರೆ.
ಬಾಂಗ್ಲಾದೇಶ ವಿರುದ್ಧ ಮೂರನೇ ಟಿ20 ಪಂದ್ಯದಲ್ಲಿ ಭಾರತ 30 ರನ್ ಗಳಿಂದ ಭರ್ಜರಿ ಜಯ ಗಳಿಸಿ ಸರಣಿಯನ್ನು ಕೈವಶ ಮಾಡಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


