ಹ್ಯಾಟ್ರಿಕ್ ಮೂಲಕ ದಾಖಲೆ ಬರೆದ ದೀಪಕ್ ಚಾಹರ್!
ಟೀಂ ಇಂಡಿಯಾದ ಉದಯೋನ್ಮುಖ ಬೌಲಕ್ ದೀಪಕ್ ಚಾಹರ್ ತಮ್ಮ ಅಮೋಘ ಬೌಲಿಂಗ್ ಪ್ರದರ್ಶನದ ಮೂಲಕ ವಿಶ್ವ ದಾಖಲೆ ನಿರ್ಮಾಣ ಮಾಡಿದ್ದಾರೆ.

ನಾಗಪುರ: ಟೀಂ ಇಂಡಿಯಾದ ಉದಯೋನ್ಮುಖ ಬೌಲಕ್ ದೀಪಕ್ ಚಾಹರ್ ತಮ್ಮ ಅಮೋಘ ಬೌಲಿಂಗ್ ಪ್ರದರ್ಶನದ ಮೂಲಕ ವಿಶ್ವ ದಾಖಲೆ ನಿರ್ಮಾಣ ಮಾಡಿದ್ದಾರೆ.
ನಿನ್ನೆ ನಾಗಪುರದಲ್ಲಿ ನಡೆದ ಬಾಂಗ್ಲಾದೇಶದ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಭಾರತ ತಂಡ 30 ರನ್ ಗಳ ಅಂತರದ ಭರ್ಜರಿ ಜಯ ಸಾಧಿಸಿತ್ತು. ಭಾರತ ನೀಡಿದ್ದ 175 ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ಬಾಂಗ್ಲಾದೇಶ ಕೇವಲ 174 ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ 30 ರನ್ ಗಳ ಅಂತರದಲ್ಲಿ ಶರಣಾಯಿತು.
ತಂಡದ ಗೆಲುವಿನಲ್ಲಿ ವೇಗಿ ದೀಪಕ್ ಚಹರ್ ಹ್ಯಾಟ್ರಿಕ್ ವಿಕೆಟ್ ಪಡೆದು ಪ್ರಮುಖ ಪಾತ್ರ ನಿರ್ವಹಿಸಿದರು. ದೀಪಕ್ ಚಾಹರ್ (3.2–0–7–6) ಹ್ಯಾಟ್ರಿಕ್ ಸಹಿತ ವಿಶ್ವದಾಖಲೆಯ ಬೌಲಿಂಗ್ ಪ್ರದರ್ಶನ ನೀಡಿದರು. ಅವರ ದಾಳಿಗೆ ನಲುಗಿದ ಬಾಂಗ್ಲಾದೇಶ ಮೂರನೇ ಹಾಗೂ ಅಂತಿಮ ಟ್ವೆಂಟಿ–20 ಕ್ರಿಕೆಟ್ ಪಂದ್ಯದಲ್ಲಿ ಭಾನುವಾರ ಭಾರತಕ್ಕೆ 30 ರನ್‌ಗಳಿಂದ ಮಣಿಯಿತು.
ಚಾಹರ್ ಸಾಧನೆ ಚುಟುಕು ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆ ಎನಿಸಿತು. 2012ರಲ್ಲಿ ಜಿಂಬಾಬ್ವೆ ವಿರುದ್ಧ ಶ್ರೀಲಂಕಾದ ಸ್ಪಿನ್ನರ್ ಅಜಂತ ಮೆಂಡಿಸ್ 8 ರನ್ನಿಗೆ 6 ವಿಕೆಟ್ ಪಡೆದಿದ್ದು ಇದುವರೆಗಿನ ದಾಖಲೆಯಾಗಿತ್ತು. ತಮ್ಮ ಮೂರನೇ ಓವರ್‌ನ ಕೊನೆಯ ಎಸೆತದಲ್ಲಿ (ಶಫಿಯಲ್ ಇಸ್ಲಾಂ) ಹಾಗೂ ಅಂತಿಮ ಓವರ್‌ನ ಮೊದಲ ಎರಡು ಎಸೆತಗಳಲ್ಲಿ (ಮುಸ್ತಫಿಜುರ್, ಅಮಿನುಲ್ ಇಸ್ಲಾಂ) ವಿಕೆಟ್ ಪಡೆದರು. ಆ ಮೂಲಕ ಟಿ–20ಯಲ್ಲಿ ಹ್ಯಾಟ್ರಿಕ್ ಸಾಧನೆಗೈದ ಭಾರತದ ಮೊದಲ ಬೌಲರ್ ಎಂಬ ಗೌರವಕ್ಕೂ ಭಾಜನರಾದರು.
ಟಿ20ಯಲ್ಲಿ ಇದು ಶ್ರೇಷ್ಠ ಹ್ಯಾಟ್ರಿಕ್ ಸಾಧನೆಯಾಗಿದ್ದು, ಇದಕ್ಕೂ ಮೊದಲು ಶ್ರೀಲಂಕಾದ ಅಜಂತಾ ಮೆಂಡಿಸ್ ಈ ದಾಖಲೆ ಹೊಂದಿದ್ದರು. ಮೆಂಡಿಸ್ 2012ರಲ್ಲಿ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ 4 ಓವರ್ ಎಸೆದು8 ರನ್ ನೀಡಿ 6 ವಿಕೆಟ್ ಕಬಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


