ಬಾಂಗ್ಲಾದ ನಾಗಿನ್ ಡ್ಯಾನ್ಸ್‌ಗೆ 'ಪುಂಗಿ' ಊದಿದಾ ಚಹಾರ್ ಹ್ಯಾಟ್ರಿಕ್ ವಿಕೆಟ್ ಮತ್ತು ಶ್ರೇಯಸ್ ಹ್ಯಾಟ್ರಿಕ್ ಸಿಕ್ಸ್, ವಿಡಿಯೋ ವೈರಲ್!
ಟೀಂ ಇಂಡಿಯಾ ವಿರುದ್ಧದ ಮೂರನೇ ಟಿ20 ಪಂದ್ಯವನ್ನು ಗೆಲ್ಲುವ ಮೂಲಕ ಭಾರತದ ನೆಲದಲ್ಲಿ ಪುಂಗಿ ಊದಲು ಬಾಂಗ್ಲಾದೇಶ ದೇಶ ರೆಡಿಯಾಗಿತ್ತು. ಆದರೆ ಅದಕ್ಕೆ ಹೊಡೆತ ಕೊಟ್ಟಿದ್ದೆ ಚಹಾರ್ ಹ್ಯಾಟ್ರಿಕ್ ಸಿಕ್ಸ್ ಮತ್ತು ಶ್ರೇಯಸ್ ಅಯ್ಯರ್ ಅವರ ಹ್ಯಾಟ್ರಿಕ್ ಸಿಕ್ಸ್ ಗಳು. ಈ ಇಬ್ಬರು ಆಟಗಾರರು...

ಟೀಂ ಇಂಡಿಯಾ ವಿರುದ್ಧದ ಮೂರನೇ ಟಿ20 ಪಂದ್ಯವನ್ನು ಗೆಲ್ಲುವ ಮೂಲಕ ಭಾರತದ ನೆಲದಲ್ಲಿ ಪುಂಗಿ ಊದಲು ಬಾಂಗ್ಲಾದೇಶ ದೇಶ ರೆಡಿಯಾಗಿತ್ತು. ಆದರೆ ಅದಕ್ಕೆ ಹೊಡೆತ ಕೊಟ್ಟಿದ್ದೆ ಚಹಾರ್ ಹ್ಯಾಟ್ರಿಕ್ ಸಿಕ್ಸ್ ಮತ್ತು ಶ್ರೇಯಸ್ ಅಯ್ಯರ್ ಅವರ ಹ್ಯಾಟ್ರಿಕ್ ಸಿಕ್ಸ್ ಗಳು. ಈ ಇಬ್ಬರು ಆಟಗಾರರು ಪಡೆದ ಹ್ಯಾಟ್ರಿಕ್ ವಿಕೆಟ್ ಮತ್ತು ಹ್ಯಾಟ್ರಿಕ್ ಸಿಕ್ಸ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಟೀಂ ಇಂಡಿಯಾ ಗೆಲುವಿನಲ್ಲಿ ವೇಗಿ ದೀಪಕ್ ಚಹರ್ ಹ್ಯಾಟ್ರಿಕ್ ವಿಕೆಟ್ ಪಡೆದು ಪ್ರಮುಖ ಪಾತ್ರ ನಿರ್ವಹಿಸಿದರು. ದೀಪಕ್ ಚಾಹರ್ (3.2–0–7–6) ಹ್ಯಾಟ್ರಿಕ್ ಸಹಿತ ವಿಶ್ವದಾಖಲೆಯ ಬೌಲಿಂಗ್ ಪ್ರದರ್ಶನ ನೀಡಿದರು.
ಇನ್ನು ಇದೇ ಪಂದ್ಯದಲ್ಲಿ ಯುವ ಬ್ಯಾಟ್ಸ್ ಮನ್ ಶ್ರೇಯಸ್ ಅಯ್ಯರ್ 33 ಎಸೆತಗಳಲ್ಲಿ 62 ರನ್ ಬಾರಿಸಿದ್ದರು. 3 ಬೌಂಡರಿ ಮತ್ತು 5 ಸಿಕ್ಸರ್ ಸಿಡಿಸಿದ್ದರು. ಒಂದೇ ಓವರ್ ನಲ್ಲಿ ಶ್ರೇಯಸ್ ಹ್ಯಾಟ್ರಿಕ್ ಸಿಕ್ಸ್ ಸಹ ಬಾರಿಸಿದ್ದರು.
ಈ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾ ವಿರುದ್ಧ 30 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿ, ಟಿ20 ಸರಣಿಯನ್ನು ಕೈವಶ ಮಾಡಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


