ವಿರಾಟ್ ಕೊಹ್ಲಿಗೆ ಮುಂದಿದೆ ತಲೆ ನೋವು: ರೋಹಿತ್ ಹೀಗೆ ಹೇಳಿದ್ದೇಕೆ?
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಮುಂದಿದೆ ತಲೆ ನೋವು ಎಂದು ರೋಹಿತ್ ಶರ್ಮಾ ಹೇಳಿದ್ದು ಇದೀಗ ಕ್ರಿಕೆಟ್ ವಲಯದಲ್ಲಿ ಬಿರುಗಾಳಿ ಎಬ್ಬಿಸಿದೆ.

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಮುಂದಿದೆ ತಲೆ ನೋವು ಎಂದು ರೋಹಿತ್ ಶರ್ಮಾ ಹೇಳಿದ್ದು ಇದೀಗ ಕ್ರಿಕೆಟ್ ವಲಯದಲ್ಲಿ ಬಿರುಗಾಳಿ ಎಬ್ಬಿಸಿದೆ.
ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯಲ್ಲಿ ಟೀಂ ಇಂಡಿಯಾದ ಯುವ ಆಟಗಾರರು ಭರ್ಜರಿ ಪ್ರದರ್ಶನ ನೀಡಿದ್ದು ಸರಣಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಇದರ ಬೆನ್ನಲ್ಲೇ ರೋಹಿತ್ ಶರ್ಮಾ ತಂಡದ ಆಟಗಾರರ ಪ್ರದರ್ಶನ ವಿರಾಟ್ ಕೊಹ್ಲಿಗೆ ತಲೆ ನೋವಾಗಿದೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
ಟೀಂ ಇಂಡಿಯಾದ ಯುವ ಆಟಗಾರರು ಪೈಪೋಟಿಗೆ ಬಿದ್ದಂತೆ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಇದೇ ರೀತಿ ಆಟಗಾರರು ಭರ್ಜರಿ ಪ್ರದರ್ಶನ ತೋರಿಸಿದರೆ ಕೊಹ್ಲಿ ಹಾಗೂ ಬಿಸಿಸಿಐ ಆಯ್ಕೆ ಸಮಿತಿಗೆ ತಲೆ ನೋವಾಗುವುದು ಗ್ಯಾರಂಟಿ ಎಂದು ಹೇಳಿದ್ದಾರೆ.
ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಯುವ ಆಟಗಾರರ ಆಯ್ಕೆ ಕೊಹ್ಲಿಗೆ ತಲೆ ನೋವಾಗಲಿದೆ. ಮುಂದಿನ ವಿಶ್ವಕಪ್ ಟಿ20 ಸರಣಿಗೆ ತಂಡ ಆಯ್ಕೆಗೆ ದೊಡ್ಡ ಟೆನ್ಶನ್ ಆಗಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


