ಕ್ರಿಕೆಟ್

ನಾಳೆಯಿಂದ ಭಾರತ-ಬಾಂಗ್ಲಾ ನಡುವೆ ಮೊದಲನೇ ಟೆಸ್ಟ್

ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿಕೊಂಡಿರುವ ಭಾರತ ತಂಡ, ನಾಳೆಯಿಂದ ಬಾಂಗ್ಲಾದೇಶ ವಿರುದ್ಧ ಆರಂಭವಾಗುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗಿದೆ.

ನಾಳೆಯಿಂದ ಭಾರತ-ಬಾಂಗ್ಲಾ ನಡುವೆ ಮೊದಲನೇ ಟೆಸ್ಟ್
ಸಂಗ್ರಹ ಚಿತ್ರ
Published On :

ಇಂದೋರ್: ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿಕೊಂಡಿರುವ ಭಾರತ ತಂಡ, ನಾಳೆಯಿಂದ ಬಾಂಗ್ಲಾದೇಶ ವಿರುದ್ಧ ಆರಂಭವಾಗುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗಿದೆ. ಉಭಯ ತಂಡಗಳ ಮೊದಲನೇ ಹಣಾಹಣಿ ಇಲ್ಲಿನ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿರುವ ಟೀಮ್ ಇಂಡಿಯಾ, ಬಾಂಗ್ಲಾ ವಿರುದ್ಧ ಟೆಸ್ಟ್ ಸರಣಿಯನ್ನು ಯಶಸ್ವಿಯಾಗಿ ಮುಗಿಸಿ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಪಟ್ಟಿಯಲ್ಲಿ ಪ್ರಾಬಲ್ಯ ಮುಂದುವರಿಸುವ ಯೋಜನೆ ಹಾಕಿಕೊಂಡಿದೆ.

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿಯಲ್ಲಿ ಪಿಂಕ್ ಚೆಂಡಿನಲ್ಲಿ ನಡೆಯುವ ಹೊನಲು ಬೆಳಕಿನ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಆದರೆ, ನಾಳಿನ ಪಂದ್ಯದಲ್ಲಿ ಉಭಯ ತಂಡಗಳು ಸಾಮಾನ್ಯವಾಗಿ ಕೆಂಪು ಚೆಂಡು ಮೂಲಕವೇ ಟೆಸ್ಟ್ ಸರಣಿ ಆರಂಭಿಸಲಿವೆ. ಟೆಸ್ಟ್ ಚಾಂಪಿಯನ್‍ಶಿಪ್ ಅಂಕಪಟ್ಟಿಯಲ್ಲಿ ಭಾರತ 240 ಅಂಕ ಕಲೆಹಾಕುವ ಮೂಲಕ ಅಗ್ರ ಸ್ಥಾನದಲ್ಲಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.