ಕ್ರಿಕೆಟ್

ಚೆಂಡು ವಿರೂಪ: ನಿಕೋಲಸ್ ಪೂರನ್‌ಗೆ ನಾಲ್ಕು ಪಂದ್ಯಗಳ ನಿಷೇಧ!

ಆಫ್ಗಾನಿಸ್ತಾನ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ ಆರೋಪದ ಮೇಲೆ ವೆಸ್ಟ್ ಇಂಡೀಸ್ ನ ನಿಕೋಲಸ್ ಪೂರನ್ ಅವರಿಗೆ ಮುಂದಿನ ನಾಲ್ಕು ಪಂದ್ಯಗಳಿಗೆ ನಿಷೇಧ ಹೇರಲಾಗಿದೆ.

ಚೆಂಡು ವಿರೂಪ: ನಿಕೋಲಸ್ ಪೂರನ್‌ಗೆ ನಾಲ್ಕು ಪಂದ್ಯಗಳ ನಿಷೇಧ!
ನಿಕೋಲಸ್ ಪೂರನ್
Published On :

ಲಖನೌ: ಆಫ್ಗಾನಿಸ್ತಾನ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ ಆರೋಪದ ಮೇಲೆ ವೆಸ್ಟ್ ಇಂಡೀಸ್ ನ ನಿಕೋಲಸ್ ಪೂರನ್ ಅವರಿಗೆ ಮುಂದಿನ ನಾಲ್ಕು ಪಂದ್ಯಗಳಿಗೆ ನಿಷೇಧ ಹೇರಲಾಗಿದೆ. 

ನಿಕೋಲಸ್ ಚೆಂಡನ್ನು ವಿರೂಪಗೊಳಿಸಲು ಪ್ರಯತ್ನಿಸುತ್ತಿರುವ ವಿಡಿಯೋ ಹೊರಬಿದ್ದಿತ್ತು.  ಈ ವಿಡಿಯೋವನ್ನೇ ಆಧಾರವಾಗಿಟ್ಟುಕೊಂಡು ಐಸಿಸಿ ನೀತಿ ಸಂಹಿತೆ 2.14 ಅನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಪೂರನ್ ಗೆ ಮುಂದಿನ ನಾಲ್ಕು ಪಂದ್ಯಗಳಿಗೆ ನಿಷೇಧ ಹೇರಿದೆ. 

ಆಫ್ಗಾನಿಸ್ತಾನ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯನ್ನು ವೆಸ್ಟ್ ಇಂಡೀಸ್ ಕ್ಲೀನ್ ಸ್ವೀಪ್ ಮಾಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.