ಡಿಡಿಸಿಎ ಅಧ್ಯಕ್ಷ ಸ್ಥಾನಕ್ಕೆ ರಜತ್ ಶರ್ಮಾ ರಾಜೀನಾಮೆ
ಹಿರಿಯ ಪತ್ರಕರ್ತ ರಜತ್ ಶರ್ಮಾ ಅವರು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ)ಯ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ.

ನವದೆಹಲಿ: ಹಿರಿಯ ಪತ್ರಕರ್ತ ರಜತ್ ಶರ್ಮಾ ಅವರು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ)ಯ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ.
ದೆಹಲಿ ಕ್ರಿಕೆಟ್ ಸಂಸ್ಥೆಯಲ್ಲಿ ಕಾಣಿಸಿಕೊಂಡಿರುವ ಬಿಕ್ಕಟ್ಟು ಹಾಗೂ ಸಂಸ್ಥೆಯೊಳಗಿನ ಒತ್ತಡ ಮತ್ತು ಜಿದ್ದಾಜಿದ್ದಿಯ ಕಾರಣಗಳಿಂದಾಗಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ತಾವು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ರಜತ್ ಶರ್ಮಾ ಹೇಳಿದ್ದಾರೆ.
ಈ ಕ್ರಿಕೆಟ್ ಸಂಸ್ಥೆಯಲ್ಲಿ ಕ್ರಿಕೆಟ್‌ಗಿಂತಲೂ ಸ್ವಹಿತಾಸಕ್ತಿಯೇ ಹೆಚ್ಚು ಕಾರ್ಯೋನ್ಮುಖವಾಗಿರುವಂತೆ ನನ್ನ ಅನುಭವಕ್ಕೆ ಬಂದಿದೆ. ನನ್ನ ಪ್ರಮಾಣಿಕತೆ ಮತ್ತು ಪಾರದರ್ಶಕ ಸಿದ್ಧಾಂತಗಳೊಟ್ಟಿಗೆ ಡಿಡಿಸಿಎನಲ್ಲಿ ನಾನು ಮುಂದುವರಿಯಲು ಬಹುಶಃ ಸಾಧ್ಯವಾಗುವುದಿಲ್ಲ. ಪ್ರಮಾಣಿಕತೆ ವಿಚಾರದಲ್ಲಿ ನಾನು ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ ಎಂದು ಶರ್ಮಾ ಹೇಳಿದ್ದಾರೆ.
ಮಾಜಿ ಕೇಂದ್ರ ಸಚಿವ ದಿ. ಅರುಣ್ ಜೇಟ್ಲಿ ಅವರ ಬೆಂಬಲದೊಂದಿಗೆ ಶರ್ಮಾ ಕ್ರಿಕೆಟ್ ಮಂಡಳಿಗೆ ಸೇರ್ಪಡೆಯಾಗಿದ್ದರು. ಆದರೆ, ಜೇಟ್ಲಿ ಅವರ ನಿಧನದ ಬಳಿಕ ಡಿಡಿಸಿಎನಲ್ಲಿ ಶರ್ಮಾ ಅವರು ನೆಲೆ ಕಳೆದುಕೊಂಡಿದ್ದರು ಎಂದು ಕ್ರಿಕೆಟ್ ಮಂಡಳಿಯ ಸದಸ್ಯರು ಹೇಳುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


