ಕ್ರಿಕೆಟ್

ಗೋವಾ ವಿರುದ್ಧ ಕರ್ನಾಟಕಕ್ಕೆ 35 ರನ್ ಜಯ

ನೆರವಿನಿಂದ ಕರ್ನಾಟಕ ತಂಡ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟಿ-20 ಟೂರ್ನಿಯ ‘ಎ’ ಗುಂಪಿನ ಕೊನೆಯ ಲೀಗ್ ಪಂದ್ಯದಲ್ಲಿ ಗೋವಾ ವಿರುದ್ಧ 35 ರನ್ ಗಳಿಂದ ಜಯ ಗಳಿಸಿದೆ.

ಗೋವಾ ವಿರುದ್ಧ ಕರ್ನಾಟಕಕ್ಕೆ 35 ರನ್ ಜಯ
ಗೋವಾ ವಿರುದ್ಧ ಕರ್ನಾಟಕಕ್ಕೆ 35 ರನ್ ಜಯ
Published On :

ವಿಜಯನಗರಂ: ನೆರವಿನಿಂದ ಕರ್ನಾಟಕ ತಂಡ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟಿ-20 ಟೂರ್ನಿಯ ‘ಎ’ ಗುಂಪಿನ ಕೊನೆಯ ಲೀಗ್ ಪಂದ್ಯದಲ್ಲಿ ಗೋವಾ ವಿರುದ್ಧ 35 ರನ್ ಗಳಿಂದ ಜಯ ಗಳಿಸಿದೆ. 

ಪವನ್ ದೇಶ್‌ಪಾಂಡೆ (63 ರನ್, 32 ಎಸೆತಗಳು) ಅವರ ಅತ್ಯಮೂಲ್ಯ ಅರ್ಧ ಶತಕ ಹಾಗೂ ಶ್ರೇಯಸ್ ಗೋಪಾಲ್ (14 ಕ್ಕೆ 3) ಅವರ ಸ್ಪಿನ್ ಮೋಡಿಯ ನೆರವಿನಿಂದ ಕರ್ನಾಟಕ ತಂಡ ಜಯ ಗಳಿಸಲು ಸಾಧ್ಯವಾಯಿತು. 

ಇದರೊಂದಿಗೆ  20 ಅಂಕಗಳೊಂದಿಗೆ ‘ಎ’ ಗುಂಪು ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿತು. ಇಲ್ಲಿನ ಡಾ. ಪಿ.ವಿ.ಜಿ ರಾಜು ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ತಂಡ, ನಿಗದಿತ 20 ಓವರ್ ಗಳಿಗೆ 9 ವಿಕೆಟ್ ನಷ್ಟಕ್ಕೆ 172 ರನ್ ದಾಖಲಿಸಿತು. 

ಬಳಿಕ ಗುರಿ ಹಿಂಬಾಲಿಸಿದ ಗೋವಾ 19.3 ಓವರ್ ಗಳಿಗೆ 137 ರನ್ ಗಳಿಗೆ ಆಲೌಟ್ ಆಯಿತು. ಕರ್ನಾಟಕ ನೀಡಿದ್ದ ಸ್ಪರ್ಧಾತ್ಮಕ ಗುರಿ ಹಿಂಬಾಲಿಸಿದ ಗೋವಾ ತಂಡ ಮೊದಲನೇ ವಿಕೆಟ್ ಬೇಗ ಕಳೆದುಕೊಂಡಿತು. ಆದರೂ. ಆರಂಭಿಕ ಬ್ಯಾಟ್ಸ್‌‌ಮನ್ ಆದಿತ್ಯ ಕೌಶಿಕ್ ಅವರು ಅತ್ಯುತ್ತಮ ಪ್ರದರ್ಶನ ತೋರಿದರು. 43 ಎಸೆತಗಳಿಗೆ 48 ರನ್ ಗಳಿಸಿದರು. ಇವರ ಜತೆ ಮಲ್ಲಿಕ್ ಸಾಬ್ ಸಿರೂರ್ 13 ಎಸೆತಗಳಿಗೆ 27 ರನ್ ಸಿಡಿಸಿದರು. ಮಧ್ಯಮ ಕ್ರಮಾಂಕದಲ್ಲಿ ಪ್ರಭು ದೇಸಾಯಿ 26 ಎಸೆತಗಳಿಗೆ 28 ರನ್ ಗಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.