ಮಾಯಾಂಕ್ ಅಗರ್ ವಾಲ್ ಪರ ಸುನೀಲ್ ಗವಾಸ್ಕರ್ ಬ್ಯಾಟಿಂಗ್
ಆಡಿರುವ ಎಂಟು ಪಂದ್ಯಗಳಲ್ಲಿ ಗಮನಾರ್ಹ ಪ್ರದರ್ಶನ ತೋರಿರುವ ಮಯಾಂಕ್ ಅಗರ್ವಾಲ್ ಅವರು ಮುಂದಿನ ವರ್ಷವೂ ತನ್ನ ಬ್ಯಾಟಿಂಗ್ ಲಯ ಮುಂದುವರಿಸಲಿದ್ದಾರೆಂದು ಬ್ಯಾಟಿಂಗ್ ದಿಗ್ಗಜ ಸುನೀಲ್ ಗವಾಸ್ಕರ್‌ರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಂಬೈ: ಆಡಿರುವ ಎಂಟು ಪಂದ್ಯಗಳಲ್ಲಿ ಗಮನಾರ್ಹ ಪ್ರದರ್ಶನ ತೋರಿರುವ ಮಯಾಂಕ್ ಅಗರ್ವಾಲ್ ಅವರು ಮುಂದಿನ ವರ್ಷವೂ ತನ್ನ ಬ್ಯಾಟಿಂಗ್ ಲಯ ಮುಂದುವರಿಸಲಿದ್ದಾರೆಂದು ಬ್ಯಾಟಿಂಗ್ ದಿಗ್ಗಜ ಸುನೀಲ್ ಗವಾಸ್ಕರ್‌ರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕನ್ನಡಿಗ ಮಯಾಂಕ್ ಅಗರ್ವಾಲ್ ಅವರು ಬಾಂಗ್ಲಾದೇಶ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯದಲ್ಲಿ 243 ರನ್ ಗಳಿಸಿದ್ದರು. ಇದು ಅವರ ವೃತ್ತಿ ಜೀವನದ ವೈಯಕ್ತಿಕ ಅತಿ ಹೆಚ್ಚು ರನ್ ಆಗಿತ್ತು. ಇವರ ಅದ್ಭುತ ಬ್ಯಾಟಿಂಗ್ ನೆರವಿನಿಂದ ಭಾರತ ಇನಿಂಗ್ಸ್ ಹಾಗೂ 130 ರನ್ ಗಳಿಂದ ಜಯ ಸಾಧಿಸಿತ್ತು.
ಇತ್ತೀಚೆಗೆ ಬಿಡುಗಡೆಯಾಗಿದ್ದ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಮಯಾಂಕ್ 11ನೇ ಸ್ಥಾನ ಪಡೆಯುವ ಮೂಲಕ ವೃತ್ತಿ ಜೀವನದ ಶ್ರೇಷ್ಠ ಕ್ರಮಾಂಕ ಪಡೆದಿದ್ದಾರೆ.
‘‘ ಮಯಾಂಕ್ ಅಗರ್ವಾಲ್ ಟೆಸ್ಟ್ ಕ್ರಿಕೆಟ್ ತುಂಬಾ ಆಹ್ಲಾದಿಸುತ್ತಿದ್ದಾರೆ. ಮೊದಲನೇ ವರ್ಷದಂತೆ ಎರಡನೇ ವರ್ಷವೂ ಅದೇ ಬ್ಯಾಟಿಂಗ್ ಮುಂದುವರಿಸಲಿದ್ದಾರೆಂಬ ನಂಬಿಕೆ ಇದೆ. ಬಲಗೈ ಆರಂಭಿಕನ ಬಗ್ಗೆ ಎರಡನೇ ವರ್ಷ ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. ಆದರೆ, ಸದ್ಯ ಅವರು ಅತ್ಯುತ್ತಮ ಬ್ಯಾಟಿಂಗ್ ಮಾಡುತ್ತಿದ್ದಾರೆ.’’ ಎಂದು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


