ಆಸ್ಟ್ರೇಲಿಯಾ ಕ್ರಿಕೆಟಿಗರ ಮಟ್ಟಿಗೆ ಪ್ರಸ್ತುತ ಪಾಕ್ ಪ್ರಧಾನಿ ಶೋಯೆಬ್ ಅಖ್ತರ್: ವಿಡಿಯೋ ವೈರಲ್!
ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿರುವ ಪಾಕಿಸ್ತಾನ ಕ್ರಿಕೆಟಿಗರು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಚನ್ನಾಗಿ ಆಡುವಂತೆ ಶುಭಾಶಯ ಕೋರಿದ್ದರು. ಇದೇ ವೇಳೆ ಆಸ್ಟ್ರೇಲಿಯಾ ಕ್ರಿಕೆಟಿಗರಿಗೆ ಪಾಕ್ ಪ್ರಧಾನಿ ಯಾರು ಎಂಬುದೇ ಗೊತ್ತಿಲ್ಲ. ಪಾಕ್ ಪ್ರಧಾನಿ ಯಾರು ಎಂಬ ಪ್ರಶ್ನೆಗೆ ಕ್ರಿಕೆಟಿಗರು ಉತ್ತರಿಸಿರುವ ವಿಡಿಯೋ ಸಖತ್ ವೈರಲ್ ಆಗಿದೆ.

ಬ್ರಿಸ್ಬೇನ್: ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿರುವ ಪಾಕಿಸ್ತಾನ ಕ್ರಿಕೆಟಿಗರು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಚನ್ನಾಗಿ ಆಡುವಂತೆ ಶುಭಾಶಯ ಕೋರಿದ್ದರು. ಇದೇ ವೇಳೆ ಆಸ್ಟ್ರೇಲಿಯಾ ಕ್ರಿಕೆಟಿಗರಿಗೆ ಪಾಕ್ ಪ್ರಧಾನಿ ಯಾರು ಎಂಬುದೇ ಗೊತ್ತಿಲ್ಲ. ಪಾಕ್ ಪ್ರಧಾನಿ ಯಾರು ಎಂಬ ಪ್ರಶ್ನೆಗೆ ಕ್ರಿಕೆಟಿಗರು ಉತ್ತರಿಸಿರುವ ವಿಡಿಯೋ ಸಖತ್ ವೈರಲ್ ಆಗಿದೆ.
ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಪಾಕ್ 0-2ಯಿಂದ ಸೋಲು ಕಂಡಿದೆ. ಇದೀಗ ಟೆಸ್ಟ್ ಸರಣಿಗೆ ಸಿದ್ಧತೆ ನಡೆಸಿದೆ. ಇದರ ಮಧ್ಯೆ ಆಸ್ಟ್ರೇಲಿಯಾ ಟಿವಿ ಚಾನೆಲ್ ಆಸೀಸ್ ತಂಡದ ಸಾಮಾನ್ಯ ಜ್ಞಾನವನ್ನು ಪರೀಕ್ಷಿಸಲು ಪ್ರಯತ್ನಿಸಿತ್ತು. ಈ ವೇಳೆ ಆಟಗಾರರಿಗೆ ಪಾಕ್ ಪ್ರಧಾನಿ ಯಾರು ಎಂದ ಕೇಳಲಾಗಿತ್ತು.
ಕೆಲ ಆಟಗಾರರು ಪಾಕ್ ಪ್ರಧಾನಿ ಎಂದು ಶೋಯೆಬ್ ಅಖ್ತರ್ ಹೆಸರನ್ನು ಹೇಳಿದ್ದಾರೆ. ಟಿವಿ ಚಾನೆಲ್ ತಮಾಷೆಗೆ ಈ ವಿಡಿಯೋವನ್ನು ಮಾಡಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ 1992ರಲ್ಲಿ ಇಮ್ರಾನ್ ಖಾನ್ ನೇತೃತ್ವದಲ್ಲಿ ಪಾಕ್ ವಿಶ್ವಕಪ್ ಗೆದ್ದಿತ್ತು. ಅಂದಿನ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


