ಐತಿಹಾಸಿಕ ಹಗಲು ರಾತ್ರಿ ಟೆಸ್ಟ್: ಬಾಂಗ್ಲಾ ಬ್ಯಾಟಿಂಗ್, ಪಂದ್ಯ ವೀಕ್ಷಿಸಲು ಬಾಂಗ್ಲಾ ಪ್ರಧಾನಿ ಆಗಮನ!
ಭಾರತ ಮತ್ತು ಬಾಂಗ್ಲಾದೇಶ ನಡುವೆ ಐತಿಹಾಸಿಕ ಹಗಲು ರಾತ್ರಿ ಟೆಸ್ಟ್ ಪಂದ್ಯ ನಡೆಯುತ್ತಿದ್ದು ಈ ಪಂದ್ಯ ವೀಕ್ಷಿಸಲು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರು ಢಾಕಾದಿಂದ ವಿಶೇಷ ವಿಮಾನದ ಮೂಲಕ ಕೋಲ್ಕತ್ತಾಗೆ ಆಗಮಿಸಿದ್ದಾರೆ.

ಢಾಕಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಐತಿಹಾಸಿಕ ಹಗಲು ರಾತ್ರಿ ಟೆಸ್ಟ್ ಪಂದ್ಯ ನಡೆಯುತ್ತಿದ್ದು ಈ ಪಂದ್ಯ ವೀಕ್ಷಿಸಲು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರು ಢಾಕಾದಿಂದ ವಿಶೇಷ ವಿಮಾನದ ಮೂಲಕ ಕೋಲ್ಕತ್ತಾಗೆ ಆಗಮಿಸಿದ್ದಾರೆ.
ಇಂದು ಈಡನ್ ಗಾರ್ಡನ್‌ನಲ್ಲಿ ಗುಲಾಬಿ ಚೆಂಡಿನೊಂದಿಗೆ ನಡೆಯಲಿರುವ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕೆ ಹಾಜರಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರಿಗೆ ಆಹ್ವಾನ ನೀಡಿದ್ದರು.
ಹಸೀನಾ ಮತ್ತು ಅವರ ಪರಿವಾರ, ಹಜರತ್ ಶಹಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಎಚ್‌ಎಸ್‌ಐಎ) ವಿಶೇಷ ವಿಮಾನದ ಮೂಲಕ ಬೆಳಿಗ್ಗೆ 10.15 ಕ್ಕೆ ಕೋಲ್ಕತ್ತಾಕ್ಕೆ ಹೊರಟಿತು ಎಂದು ಡೈಲಿ ಸ್ಟಾರ್ ವರದಿ ಮಾಡಿದೆ.
ವಿಮಾನವು ಕೋಲ್ಕತ್ತಾದ ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ 10:40 ಕ್ಕೆ (ಭಾರತೀಯ ಸಮಯ) ಬಂದು ಇಳಿದಿದೆ.
ಬಾಂಗ್ಲಾದೇಶದ ಪ್ರಧಾನಿ ಮಧ್ಯಾಹ್ನ 12.30 ಕ್ಕೆ (ಸ್ಥಳೀಯ ಕಾಲಮಾನ) ಈಡನ್ ಗಾರ್ಡನ್ಸ್ ಕ್ರೀಡಾಂಗಣಕ್ಕೆ ತೆರಳಲಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಟೆಸ್ಟ್ ಪಂದ್ಯದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಟಾಸ್ ಗೆದ್ದ ಬಾಂಗ್ಲಾದೇಶ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು ಆರಂಭಿಕ ಆಘಾತ ಎದುರಾಗಿದೆ. ಬಾಂಗ್ಲಾದೇಶ 17 ರನ್ ಗಳಿಗೆ ಪ್ರಮುಖ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


