ಐತಿಹಾಸಿಕ ಹಗಲು-ರಾತ್ರಿ ಟೆಸ್ಟ್: 106 ಅಲ್ಪಮೊತ್ತಕ್ಕೆ ಮುಗ್ಗರಿಸಿದ ಬಾಂಗ್ಲಾ, ಇಶಾಂತ್ಗೆ 5 ವಿಕೆಟ್!
ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಐತಿಹಾಸಿಕ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾವನ್ನು ಮೊದಲ ಇನ್ನಿಂಗ್ಸ್ ಗೆ 106 ರನ್ ಗಳಿಗೆ ಆಲೌಟ್ ಮಾಡಿದೆ.

ಕೋಲ್ಕತ್ತಾ: ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಐತಿಹಾಸಿಕ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾವನ್ನು ಮೊದಲ ಇನ್ನಿಂಗ್ಸ್ ಗೆ 106 ರನ್ ಗಳಿಗೆ ಆಲೌಟ್ ಮಾಡಿದೆ.
ಕೋಲ್ಕತ್ತಾದ ಈಡೆನ್ ಗಾರ್ಡನ್ ನಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ಅಲ್ಪ ಮೊತ್ತಕ್ಕೆ ಆಲೌಟ್ ಆಗಿದೆ. ಇಶಾಂತ್ ಶರ್ಮಾ ಅಮೋಘ ಬೌಲಿಂಗ್ ದಾಳಿಯಿಂದ ಬಾಂಗ್ಲಾದೇಶ 106 ರನ್ ಗಳಿಗೆ ಆಲೌಟ್ ಆಯಿತು.
ಬಾಂಗ್ಲಾದೇಶ ಪರ ಇಸ್ಲಾಂ 29, ಲಿಟನ್ ದಾಸ್ 24 ಮತ್ತು ನಯಿಮ್ ಹಸನ್ 19 ರನ್ ಪೇರಿಸಿದ್ದು ಇನ್ನು ರ್ಯಾರು ಎರಡು ಅಂಕಿಯನ್ನು ಸಹ ದಾಟಲಿಲ್ಲ.
ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಇಶಾಂತ್ ಶರ್ಮಾ 5, ಉಮೇಶ್ ಯಾದವ್ 3 ಮತ್ತು ಮೊಹಮ್ಮದ್ ಶಮಿ 2 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


