ನಂಬಿಕೆ ಇದೆ ಸೌರವ್ ಗಂಗೂಲಿ ಆಯ್ಕೆ ಸಮಿತಿನ ಬದಲಾಯಿಸ್ತಾರೆ: ಹರ್ಭಜನ್ ಸಿಂಗ್
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಆಯ್ಕೆ ಸಮಿತಿಯನ್ನು ಬದಲಾಯಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ಮಾಜಿ ಸ್ಪಿನ್ ಮಾಂತ್ರಿಕಾ ಹರ್ಭಜನ್ ಸಿಂಗ್ ಹೇಳಿದ್ದಾರೆ.

ಹೈದರಾಬಾದ್: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಆಯ್ಕೆ ಸಮಿತಿಯನ್ನು ಬದಲಾಯಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ಮಾಜಿ ಸ್ಪಿನ್ ಮಾಂತ್ರಿಕಾ ಹರ್ಭಜನ್ ಸಿಂಗ್ ಹೇಳಿದ್ದಾರೆ.
ಉದಯೋನ್ಮುಖ ಯುವ ಆಟಗಾರ ಸಂಜು ಸ್ಯಾಮ್ಸನ್ ಅವರನ್ನು ವಿಂಡೀಸ್ ಸರಣಿಗೆ ಆಯ್ಕೆ ಮಾಡದಿರುವುದಕ್ಕೆ ಈ ಹಿಂದೆ ಸಂಸದ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಹರ್ಭಜನ್ ಸಿಂಗ್ ಸಹ ತರೂರ್ ಮಾತಿಗೆ ದನಿಗೂಡಿಸಿದ್ದಾರೆ.
ಆಯ್ಕೆ ಸಮಿತಿ ಸ್ಯಾಮ್ಸನ್ ಹೃದಯವನ್ನು ಪರೀಕ್ಷಿಸುತ್ತಿದೆ. ಸಮಿತಿ ಸಂಪೂರ್ಣವಾಗಿ ಬದಲಾಗಬೇಕು. ಬಲಿಷ್ಠರ ಆಗಮನವಾಗಬೇಕು. ಈ ಬಗ್ಗೆ ಸೌರವ್ ಗಂಗೂಲಿ ಕಾರ್ಯೋನ್ಮುಖರಾಗುತ್ತಾರೆ ಅನ್ನುವ ಭರವಸೆ ಇದೆ ಎಂದು ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ವೆಸ್ಟ್ ಇಂಡೀಸ್ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗುತ್ತಿದ್ದಂತೆ ಸ್ಯಾಮ್ಸನ್ ಪರ ಭಾರೀ ಬೆಂಬಲ ವ್ಯಕ್ತವಾಗಿತ್ತು. ಸತತ ವೈಫಲ್ಯ ಅನುಭವಿಸಿದರೂ ರಿಷಬ್ ಪಂತ್ ಆಯ್ಕೆ ಮಾಡಿದ್ದು ನೆಟಿಗರ ವಿರೋಧಕ್ಕೆ ಕಾರಣವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


