ಕ್ರಿಕೆಟ್

ವಿಂಡೀಸ್ ವಿರುದ್ಧ ಟಿ-20 ಸರಣಿ: ಗಾಯಾಳು ಧವನ್ ಬದಲಿಗೆ ಸಂಜು ಸ್ಯಾಮ್ಸನ್ ?

ಗಾಯಗೊಂಡು ವಿಶ್ರಾಂತಿಯಲ್ಲಿರುವ ಎಡಗೈ ಆರಂಭಿಕ ಬ್ಯಾಟ್ಸ್ ಮನ್ ಶಿಖರ್ ಧವನ್ ಅವರ ಸ್ಥಾನಕ್ಕೆ ಕೇರಳ ವಿಕೆಟ್ ಕೀಪರ್, ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ಅವರಿಗೆ ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧ ಟಿ-20 ಸರಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ವಿಂಡೀಸ್ ವಿರುದ್ಧ ಟಿ-20 ಸರಣಿ: ಗಾಯಾಳು ಧವನ್ ಬದಲಿಗೆ ಸಂಜು ಸ್ಯಾಮ್ಸನ್ ?
ವಿಂಡೀಸ್ ವಿರುದ್ಧ ಟಿ-20 ಸರಣಿ: ಗಾಯಾಳು ಧವನ್ ಬದಲಿಗೆ ಸಂಜು ಸ್ಯಾಮ್ಸನ್ ?
Published On :

ನವದೆಹಲಿ: ಗಾಯಗೊಂಡು ವಿಶ್ರಾಂತಿಯಲ್ಲಿರುವ ಎಡಗೈ ಆರಂಭಿಕ ಬ್ಯಾಟ್ಸ್ ಮನ್ ಶಿಖರ್ ಧವನ್ ಅವರ ಸ್ಥಾನಕ್ಕೆ ಕೇರಳ ವಿಕೆಟ್ ಕೀಪರ್, ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ಅವರಿಗೆ ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧ ಟಿ-20 ಸರಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. 

ಶಿಖರ್ ಧವನ್ ಅವರು ಸೈಯದ್ ಮುಷ್ತಾಕ್ ಅಲಿ ಟಿ-20 ದೇಶೀಯ ಕ್ರಿಕೆಟ್ ಟೂರ್ನಿಯಲ್ಲಿ ಆಡುವಾಗ ತಮ್ಮ ಮೊಣಕಾಲಿಗೆ ಗಾಯವಾಗಿತ್ತು. ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯುತ್ತಿರುವ ಅವರು ವಿಂಡೀಸ್ ಸರಣಿಯ ಲಭ್ಯತೆ ಬಗ್ಗೆ ಟೀಮ್ ಇಂಡಿಯಾದ ವೈದ್ಯಕೀಯ ತಂಡ ವರದಿ ಮೇಲೆ ಅವಲಂಬಿತವಾಗಿದೆ.

"ಮೊಣಕಾಲು ಗಾಯಕ್ಕೆ ಒಳಗಾಗಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿರುವ ಶಿಖರ್ ಧವನ್ ಅವರ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ಲಭ್ಯತೆಯು ವೈದ್ಯಕೀಯ ತಂಡದ ವರದಿ ಮೇಲೆ ಅವಲಂಬಿತವಾಗಿದೆ. ಒಂದು ವೇಳೆ ಅವರು ಅಲಭ್ಯರಾದರೆ, ಅವರ ಸ್ಥಾನಕ್ಕೆ ಯುವ ಆಟಗಾರ ಸಂಜು ಸ್ಯಾಮ್ಸನ್‍ಗೆ ಅವಕಾಶದ ಬಾಗಿಲು ತೆರೆಯಲಿದೆ." ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.