ಏಕದಿನ, ಟಿ20 ಸರಣಿ: ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ
ಮುಂದಿನ ತಿಂಗಳು ಆರಂಭವಾಗುವ ಭಾರತದ ವಿರುದ್ಧದ ಏಕದಿನ ಹಾಗೂ ಟಿ-20 ಸರಣಿಗಳಿಗೆ ವೆಸ್ಟ್ ಇಂಡೀಸ್ ತಂಡವನ್ನು ಪ್ರಕಟಿಸಲಾಗಿದೆ.

ನವದೆಹಲಿ: ಮುಂದಿನ ತಿಂಗಳು ಆರಂಭವಾಗುವ ಭಾರತದ ವಿರುದ್ಧದ ಏಕದಿನ ಹಾಗೂ ಟಿ-20 ಸರಣಿಗಳಿಗೆ ವೆಸ್ಟ್ ಇಂಡೀಸ್ ತಂಡವನ್ನು ಪ್ರಕಟಿಸಲಾಗಿದೆ.
ಕಿರೋನ್ ಪೋಲಾರ್ಡ್ ವೆಸ್ಟ್ ಇಂಡೀಸ್ ಎರಡೂ ತಂಡಗಳನ್ನು ಮುನ್ನಡೆಸಲಿದ್ದಾರೆ. ಚುಟುಕು ತಂಡದ ಉಪ ನಾಯಕನ ಜವಾಬ್ದಾರಿಯನ್ನು ನಿಕೋಲಸ್ ಪೂರನ್ ನಿರ್ವಹಿಸಲಿದ್ದಾರೆ. ಏಕದಿನ ತಂಡದ ಉಪ ನಾಯಕನಾಗಿ ಶಾಯ್ ಹೋಪ್ ಕಣಕ್ಕೆ ಇಳಿಯಲಿದ್ದಾರೆ.
ಪ್ರಸ್ತುತ ನಡೆಯುತ್ತಿರುವ ಅಫ್ಘಾನಿಸ್ತಾನ ವಿರುದ್ಧದ ಸರಣಿ ಆಡುತ್ತಿರುವ ಆಟಗಾರರನ್ನೇ ಉಳಿಸಿಕೊಂಡಿದೆ. ಮುಂದಿನ ವರ್ಷ ಆಸ್ಟ್ರೇಲಿಯಾದಲ್ಲಿ ಜರುಗುವ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಪೂರ್ವ ಸಿದ್ಧತೆಯನ್ನು ಭಾರತದ ವಿರುದ್ಧ ಟಿ-20 ಸರಣಿಯಿಂದ ಆರಂಭಿಸಲಿದೆ. ಮೊದಲನೇ ಪಂದ್ಯ ಡಿ.6 ರಂದು ಹೈದರಾಬಾದ್ ನಲ್ಲಿ ನಡೆಯಲಿದೆ. ನಂತರ ಡಿಸೆಂಬರ್ 8 ರಂದು ತಿರುವನಂತಪುರಂನಲ್ಲಿ ಎರಡನೇ ಟಿ 20 ಮತ್ತು ಮೂರನೇ ಪಂದ್ಯ ಡಿಸೆಂಬರ್ 11 ರಂದು ಮುಂಬೈನಲ್ಲಿ ನಡೆಯಲಿದೆ.
ಆ ಬಳಿಕ ಉಭಯ ತಂಡಗಳು ಚೆನ್ನೈ (ಡಿಸೆಂಬರ್ 15), ವೈಜಾಗ್ (ಡಿಸೆಂಬರ್ 18) ಮತ್ತು ಕಟಕ್ (ಡಿಸೆಂಬರ್ 22) ನಲ್ಲಿ ಮೂರು ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


