ಹಗಲು-ರಾತ್ರಿ ಟೆಸ್ಟ್: ಗರಿಷ್ಠ ರನ್ ಪೇರಿಸಿ ದಾಖಲೆ ಬರೆದ ಡೇವಿಡ್ ವಾರ್ನರ್!
ಪಾಕಿಸ್ತಾನದ ವಿರುದ್ಧ ಅಡಿಲೇಡ್ ನಲ್ಲಿ ನಡೆಯುತ್ತಿರುವ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ದಾಖಲೆ ನಿರ್ಮಾಣ ಮಾಡಿದ್ದಾರೆ.

ಅಡಿಲೇಡ್: ಪಾಕಿಸ್ತಾನದ ವಿರುದ್ಧ ಅಡಿಲೇಡ್ ನಲ್ಲಿ ನಡೆಯುತ್ತಿರುವ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ದಾಖಲೆ ನಿರ್ಮಾಣ ಮಾಡಿದ್ದಾರೆ.
ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಅಜೇಯ 275 ರನ್ ಗಳಿಸಿ ತ್ರಿಶತಕದತ್ತ ಹೆಜ್ಜೆಯನ್ನಿರಿಸಿದ್ದಾರೆ. ಅಲ್ಲದೆ ಹಗಲು ರಾತ್ರಿ ಟೆಸ್ಟ್ ಪಂದ್ಯದಲ್ಲಿ ಗರಿಷ್ಛ ರನ್ ಗಳಿಸಿದ ಸಾಧನೆ ಗೈದಿದ್ದಾರೆ. ಅಡಿಲೇಡ್ ಪಂದ್ಯದ ಮೂಲಕ ವಾರ್ನರ್ ಹಗಲು ರಾತ್ರಿ ಟೆಸ್ಟ್ ಪಂದ್ಯದಲ್ಲಿ ಒಟ್ಟು 460 ರನ್ ಗಳಿಸಿದ್ದು, ಆ ಮೂಲಕ ಈ ಸಾಧನೆಗೈದಿದ್ದ ಪಾಕಿಸ್ತಾನ ಅಜರ್ ಅಲಿ ಅವರನ್ನು ಹಿಂದಿಕ್ಕಿದ್ದಾರೆ. ಅಜರ್ ಅಲಿ 456 ರನ್ ಗಳಿಸಿದ್ದಾರೆ. ಅಂತೆಯೇ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್ 438 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.
ಇನ್ನು ಪಾಕಿಸ್ತಾನದ ವಿರುದ್ಧ ಅಡಿಲೇಡ್ ಟೆಸ್ಟ್ ನಲ್ಲಿ ಆಸ್ಟ್ರೇಲಿಯಾ ಮೇಲುಗೈ ಸಾಧಿಸಿದ್ದು, ಕೇವಲ 3 ವಿಕೆಟ್ ನಷ್ಟಕ್ಕೆ 501 ರನ್ ಗಳಿಸಿದೆ. 280 ರನ್ ಗಳಿಸಿರುವ ವಾರ್ನರ್ ಮತ್ತು 7ರನ್ ಗಳಿಸಿರುವ ಮ್ಯಾಥ್ಯೂವೇಡ್ ಕ್ರೀಸ್ ಕಾಯ್ದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


