ಭಾರತ - ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್: ಆರಂಭಿಕನಾಗಿ ಚೊಚ್ಚಲ ಶತಕ ಸಿಡಿಸಿದ ರೋಹಿತ್ ಶರ್ಮಾ
ಟೆಸ್ಟ್ ಕ್ರಿಕೆಟ್‌ನಲ್ಲಿ ಆರಂಭಿನಾಗಿ ಆಡಿದ ಚೊಚ್ಚಲ ಇನಿಂಗ್ಸ್‌ನಲ್ಲಿಯೇ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಶತಕ ಬಾರಿಸಿದರು. ಆ ಮೂಲಕ ಆರಂಭಿಕನಾಗಿ ಆಡಿದ ಮೊದಲನೇ ಇನಿಂಗ್ಸ್‌ನಲ್ಲಿಯೇ ಶತಕ ಸಿಡಿಸಿದ...

ವಿಶಾಖಪಟ್ಟಣಂ: ಟೆಸ್ಟ್ ಕ್ರಿಕೆಟ್‌ನಲ್ಲಿ ಆರಂಭಿನಾಗಿ ಆಡಿದ ಚೊಚ್ಚಲ ಇನಿಂಗ್ಸ್‌ನಲ್ಲಿಯೇ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಶತಕ ಬಾರಿಸಿದರು. ಆ ಮೂಲಕ ಆರಂಭಿಕನಾಗಿ ಆಡಿದ ಮೊದಲನೇ ಇನಿಂಗ್ಸ್‌ನಲ್ಲಿಯೇ ಶತಕ ಸಿಡಿಸಿದ ಭಾರತದ ನಾಲ್ಕನೇ ಬ್ಯಾಟ್ಸ್‌ಮನ್ ಎಂಬ ಗೌರವಕ್ಕೆ ಪಾತ್ರರಾದರು ಮತ್ತು ವೃತ್ತಿ ಜೀವನದ ನಾಲ್ಕನೇ ಶತಕ ಪೂರೈಸಿದರು.
ಇಲ್ಲಿನ ಆಂಧ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ, 58 ಓವರ್‌ಗಳಿಗೆ ವಿಕೆಟ್ ನಷ್ಟವಿಲ್ಲದೇ 202 ರನ್ ಗಳಿಸಿದ್ದು, ಮಳೆಯಿಂದಾಗಿ ಪಂದ್ಯ ವಿಳಂಬವಾಗುತ್ತಿದೆ.
ಸೀಮಿತ ಓವರ್‌ಗಳ ಮಾದರಿಯಲ್ಲಿ ಈಗಾಗಲೇ ಭಾರತ ತಂಡದ ಆರಂಭಿಕನಾಗಿ ನೆಲೆಯೂರಿರುವ ರೋಹಿತ್ ಶರ್ಮಾ, ಅವರು ಟೆಸ್ಟ್ ಕ್ರಿಕೆಟ್ ನಲ್ಲಿ ಹೇಳಿಕೊಳ್ಳುವಂತ ಸಾಧನೆ ಮಾಡಿರಲಿಲ್ಲ. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ ಜತೆ ಆರಂಭಿಕನಾಗಿ ಮೊಟ್ಟ ಮೊದಲ ಬಾರಿ ಆಡಿದ ರೋಹಿತ್ ಅಮೋಘ ಬ್ಯಾಟಿಂಗ್ ಮಾಡಿದರು. 173 ಎಸೆತಗಳನ್ನು ಎದುರಿಸಿದ ಅವರು 115 ರನ್ ಗಳಿಸಿದರು. ಆ ಮೂಲಕ ವೃತ್ತಿ ಜೀವನದ ನಾಲ್ಕನೇ ಶತಕ ಸಿಡಿಸಿದರು. ಜತೆಗೆ, ಆರಂಭಿಕನಾಗಿ ಆಡಿದ ಟೆಸ್ಟ್ ಮೊದಲನೇ ಇನಿಂಗ್ಸ್‌ನಲ್ಲಿಯೇ ಶತಕ ಸಿಡಿಸಿದ ನಾಲ್ಕನೇ ಬ್ಯಾಟ್ಸ್‌ಮ್ಯಾನ್ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ಭೋಜನದ ಬಳಿಕವೂ ಎದುರಾಳಿ ಬೌಲರ್‌ಗಳನ್ನು ಬೆಂಡೆತ್ತುವುದನ್ನು ಮುಂದುವರಿಸಿದ ರೋಹಿತ್, 160 ಎಸೆತಗಳಲ್ಲಿ 100 ರನ್‌ಗಳನ್ನು ಪೂರೀಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


