ಕ್ರಿಕೆಟ್ ಸಲಹಾ ಸಮಿತಿಗೆ ಕಪಿಲ್ ದೇವ್ ರಾಜೀನಾಮೆ?
ಕುತೂಹಲಕಾರಿ ಬೆಳವಣಿಗೆಯಲ್ಲಿ ಬಿಸಿಸಿಐನ ಸಲಹಾ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ರಾಜಿನಾಮೆ ನೀಡಿದ್ದಾರೆ ಎನ್ನಲಾಗಿದೆ.

ನವದೆಹಲಿ: ಕುತೂಹಲಕಾರಿ ಬೆಳವಣಿಗೆಯಲ್ಲಿ ಬಿಸಿಸಿಐನ ಸಲಹಾ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ರಾಜಿನಾಮೆ ನೀಡಿದ್ದಾರೆ ಎನ್ನಲಾಗಿದೆ.
ಹೌದು... ದಶಕಗಳ ಬಳಿಕ ಇತ್ತೀಚೆಗಷ್ಟೇ ಬಿಸಿಸಿಐ ಸೇರಿದ್ದ ಕಪಿಲ್ ದೇವ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ. ಬಿಸಿಸಿಐನ ಮೂವರು ಸದಸ್ಯರ ಕ್ರಿಕೆಟ್ ಸಲಹಾ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಕಪಿಲ್ ದೇವ್ ರಾಜಿನಾಮೆ ನೀಡಿದ್ದಾರೆ ಎನ್ನಲಾಗಿದೆ.
ಸುದ್ದಿಸಂಸ್ಥೆಯೊಂದು ಈ ಬಗ್ಗೆ ವರದಿ ಮಾಡಿದ್ದು, ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಅವರು ಮೂವರು ಸದಸ್ಯರ ಕ್ರಿಕೆಟ್ ಸಲಹಾ ಸಮಿತಿಗೆ ರಾಜಿನಾಮೆ ಸಲ್ಲಿಸಿದ್ದಾರೆಂದು ವರದಿ ಮಾಡಿದೆ. ಕಪಿಲ್ ದೇವ್ ತಮ್ಮ ರಾಜೀನಾಮೆ ಪತ್ರವನ್ನು ಇ-ಮೈಲ್ ಮೂಲಕ ಸಲ್ಲಿಸಿದ್ದಾರೆಂದು ಹೇಳಲಾಗಿದೆ.
ಕಳೆದ ಎರಡು ದಿನಗಳ ಹಿಂದೆ ಕ್ರಿಕೆಟ್ ಆಡಳಿತ ಸಮಿತಿ ಮುಖ್ಯಸ್ಥ ವಿನೋದ್ ರಾಯ್ ಅವರು ಕ್ರಿಕೆಟ್ ಸಲಹಾ ಸಮಿತಿಯನ್ನು ಭಾರತ ತಂಡ ಮುಖ್ಯ ಕೋಚ್ ನೇಮಕ ಮಾಡುವ ಉದ್ದೇಶದಿಂದ ತಾತ್ಕಾಲಿಕವಾಗಿ ರಚಿಸಲಾಗಿತ್ತು ಎಂದಿದ್ದರು. ಈಗಾಗಲೇ ಮುಖ್ಯಕೋಚ್ ನೇಮಕ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಕ್ರಿಕೆಟ್ ಆಡಳಿತ ಸಮಿತಿ ವಿಸರ್ಜಿಸುವಂತೆ ಅಧಿಕೃತವಾಗಿ ಪ್ರಕಟಣೆ ಬಂದಿರಬಹುದು ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


