ಕ್ರಿಕೆಟ್

ಟೆಸ್ಟ್ ಕ್ರಿಕೆಟ್ ನಲ್ಲಿ ನೂತನ ದಾಖಲೆ ನಿರ್ಮಾಣಕ್ಕೆ ಆರ್. ಅಶ್ವಿನ್ ಸಜ್ಜು

ಟೀಂ ಇಂಡಿಯಾದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಶ್ರೀಲಂಕಾ ಪ್ರಸಿದ್ದ ಬೌಲರ್ ಮುತ್ತಯ್ಯ ಮುರಳೀಧರನ್ ಅವರ ಟೆಸ್ಟ್ ಕ್ರಿಕೆಟ್ ದಾಖಲೆ ಸರಿಗಟ್ಟಲು ಇನ್ನೊಂದೇ ಹೆಜ್ಜೆ ಬಾಕಿ ಇದೆ. ಅಶ್ವಿನ್ ಇನ್ನು ಕೇವಲ ಒಂದು ವಿಕೆಟ್ ಪಡೆದರೆ ಮುರಳೀಧರನ್ ದಾಖಲೆಯನ್ನು ಸರಿದೂಗಿಸಲಿದ್ದಾರೆ.

ಟೆಸ್ಟ್ ಕ್ರಿಕೆಟ್ ನಲ್ಲಿ ನೂತನ ದಾಖಲೆ ನಿರ್ಮಾಣಕ್ಕೆ ಆರ್. ಅಶ್ವಿನ್ ಸಜ್ಜು
ರವಿಚಂದ್ರನ್ ಅಶ್ವಿನ್
Published On :

ವಿಶಾಖಪಟ್ಟಣಂ: ಟೀಂ ಇಂಡಿಯಾದ  ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಶ್ರೀಲಂಕಾ ಪ್ರಸಿದ್ದ ಬೌಲರ್ ಮುತ್ತಯ್ಯ ಮುರಳೀಧರನ್ ಅವರ ಟೆಸ್ಟ್ ಕ್ರಿಕೆಟ್ ದಾಖಲೆ ಸರಿಗಟ್ಟಲು ಇನ್ನೊಂದೇ ಹೆಜ್ಜೆ ಬಾಕಿ ಇದೆ. ಅಶ್ವಿನ್ ಇನ್ನು ಕೇವಲ ಒಂದು ವಿಕೆಟ್ ಪಡೆದರೆ ಮುರಳೀಧರನ್ ದಾಖಲೆಯನ್ನು ಸರಿದೂಗಿಸಲಿದ್ದಾರೆ.

ವಿಶಾಖಪಟ್ಟಣಂ ನ  ಎಸಿಎ-ವಿಡಿಸಿಎ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಏಳು ವಿಕೆಟ್‌ಗಳನ್ನು ಪಡೆದ ಅಶ್ವಿನ್, ಮುರಳೀಧರನ್ ಅವರ 350 ಅತಿ ವೇಗದ ಟೆಸ್ಟ್ ವಿಕೆಟ್‌ಗಳ ವಿಶ್ವ ದಾಖಲೆಯನ್ನು ಸಮನಾಗಿಸಲು ಕೇವಲ ಒಂದು ವಿಕೆಟ್ ಕಡಿಮೆ ಇದೆ.

33ರ ಹರೆಯದ ಅಶ್ವಿನ್  66 ಟೆಸ್ಟ್ ಪಂದ್ಯಗಳಲ್ಲಿ49 ವಿಕೆಟ್ ಪಡೆದಿದ್ದಾರೆ. ಮುರಳೀಧರನ್, 2001 ರಲ್ಲಿ ಬಾಂಗ್ಲಾದೇಶ ವಿರುದ್ಧದ 66 ನೇ ಟೆಸ್ಟ್ ಪಂದ್ಯದಲ್ಲಿ 350 ವಿಕೆಟ್ ಮೈಲಿಗಲ್ಲು ತಲುಪಿದ್ದರು. ಭಾರತದ ಮಾಜಿ ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ 77 ಟೆಸ್ಟ್ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ.

ಅಶ್ವಿನ್ 2011 ರಲ್ಲಿ ಟೆಸ್ಟ್ ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು ಮತ್ತು ಅಂದಿನಿಂದ ಟೀಂ ಇಂಡಿಯಾದ ಅವಿಭಾಜ್ಯ ಅಂಗವಾಗಿದ್ದಾರೆ.ಆದಾಗ್ಯೂ, ವೆಸ್ಟ್ ಇಂಡೀಸ್ನಲ್ಲಿ ನಡೆದ ಎರಡು ಪಂದ್ಯಗಳ ಸರಣಿಯಲ್ಲಿ ಅವರನ್ನು ಕೈಬಿಡಲಾಗಿತು. ಅಲ್ಲಿ ಭಾರತ ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.