ಪೂಜಾರಗೆ ರೋಹಿತ್ ಅವಾಚ್ಯ ನಿಂದನೆ: ಕೊಹ್ಲಿಯನ್ನು ಎಳೆತಂದು ಬೆನ್ ಸ್ಟೋಕ್ಸ್ ಕಿಡಿ!
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಹಲವು ದಾಖಲೆ ಬರೆದಿರುವ ರೋಹಿತ್ ಶರ್ಮಾ ಆಟದ ಮಧ್ಯೆ ಪೂಜಾರ ವಿರುದ್ಧ ಕೆಟ್ಟ ಪದ ಬಳಸಿದ್ದರು. ಈ ಪ್ರಕರಣದ ನಡುವೆ ಇಂಗ್ಲೆಂಡ್ ಕ್ರಿಕೆಟಿಗ ಬೆನ್ ಸ್ಟೋಕ್ಸ್ ವಿರಾಟ್ ಕೊಹ್ಲಿಯನ್ನು ಎಳೆತಂದಿದ್ದಾರೆ.

ವಿಶಾಖಪಟ್ಟಣಂ: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಹಲವು ದಾಖಲೆ ಬರೆದಿರುವ ರೋಹಿತ್ ಶರ್ಮಾ ಆಟದ ಮಧ್ಯೆ ಪೂಜಾರ ವಿರುದ್ಧ ಕೆಟ್ಟ ಪದ ಬಳಸಿದ್ದರು. ಈ ಪ್ರಕರಣದ ನಡುವೆ ಇಂಗ್ಲೆಂಡ್ ಕ್ರಿಕೆಟಿಗ ಬೆನ್ ಸ್ಟೋಕ್ಸ್ ವಿರಾಟ್ ಕೊಹ್ಲಿಯನ್ನು ಎಳೆತಂದಿದ್ದಾರೆ.
ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್ ನ 25ನೇ ಓವರ್ ನಲ್ಲಿ ರೋಹಿತ್ ಶರ್ಮಾ ಗಲ್ಲಿಯಲ್ಲಿ ಚೆಂಡನ್ನು ಬಾರಿಸಿ 1 ರನ್ ಪಡೆಯಲು ಮುಂದಾಗಿದ್ದರು. ಆದರೆ ಚೇತೇಶ್ವರ ಪೂಜಾರ ರನ್ ಬೇಡ ಎಂದು
ಹಿಂದಕ್ಕೆ ಹೋಗಿದ್ದರು. ಇದರಿಂದ ಕೋಪಗೊಂಡ ರೋಹಿತ್ ಶರ್ಮಾ ಪೂಜಾರರ ವಿರುದ್ಧ ಕೆಟ್ಟ ಪದ ಬಳಕೆ ಮಾಡಿದ್ದಾರೆ. ಇದು ಸ್ಟಂಪ್ ಮೈಕ್ ನಲ್ಲಿ ರೆಕಾರ್ಡ್ ಆಗಿತ್ತು.
ರೋಹಿತ್ ಶರ್ಮಾರ ಕೆಟ್ಟ ಪದ ಬಳಕೆ ನಿಜಕ್ಕೂ ಅಸಹ್ಯ ಹುಟ್ಟಿಸುತ್ತದೆ. ರೋಹಿತ್ ಪದ ಬಳಕೆ ಕೇಳಿ ಅಭಿಮಾನಿಗಳೇ ಕಿವಿ ಮುಚ್ಚಿಕೊಳ್ಳುಂತಿದೆ. ಅಲ್ಲದೆ ರೋಹಿತ್ ಶರ್ಮಾರ ವಿರುದ್ಧ ಟೀಕೆಗಳು ಕೇಳಿಬಂದಿತ್ತು.
ರೋಹಿತ್ ವರ್ತನೆ ವಿರುದ್ಧ ಇಂಗ್ಲೆಂಡ್ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಕಿಡಿಕಾರಿದ್ದಾರೆ. ವಿರಾಟ್ ಕೊಹ್ಲಿಯನ್ನು ಈ ರೀತಿ ನೋಡಿದ್ದೇವೆ. ಇದೀಗ ರೋಹಿತ್ ಶರ್ಮಾನು ಅದೇ ಹಾದಿಯಲ್ಲಿ ನಡೆಯುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ.
ಈ ಹಿಂದೆ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಆಫ್ರಿಕಾ ತಂಡದ ಬ್ಯಾಟ್ಸ್ ಮನ್ ಗಳ ವಿರುದ್ಧ ಅವಾಚ್ಯ ಶಬ್ದ ಬಳಸಿ ಟೀಕೆಗೆ ಗುರಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


