ಕ್ರಿಕೆಟ್

ಕೊನೆಯ ದಿನ 9 ವಿಕೆಟ್ ಪತನ: ಮೊದಲ ಟೆಸ್ಟ್ ಪಂದ್ಯ ಗೆದ್ದ ಟೀಂ ಇಂಡಿಯಾ!

ಟೀಂ ಇಂಡಿಯಾದ ಬೌಲರ್ ಗಳು ಅತ್ಯುತ್ತಮ ಪ್ರದರ್ಶನ ನೀಡಿ ಕೊನೆಯ ದಿನ 9 ವಿಕೆಟ್ ಗಳನ್ನು ಕಿತ್ತು ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ.

ಕೊನೆಯ ದಿನ 9 ವಿಕೆಟ್ ಪತನ: ಮೊದಲ ಟೆಸ್ಟ್ ಪಂದ್ಯ ಗೆದ್ದ ಟೀಂ ಇಂಡಿಯಾ!
ಟೀಂ ಇಂಡಿಯಾ
Published On :

ವಿಶಾಖಪಟ್ಟಣಂ: ಟೀಂ ಇಂಡಿಯಾದ ಬೌಲರ್ ಗಳು ಅತ್ಯುತ್ತಮ ಪ್ರದರ್ಶನ ನೀಡಿ ಕೊನೆಯ ದಿನ 9 ವಿಕೆಟ್ ಗಳನ್ನು ಕಿತ್ತು ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ.

ವಿಶಾಖಪಟ್ಟಣಂನ ಡಾ.ವೈ.ಎಸ್ ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲನೇ ಟೆಸ್ಟ್‌ ಪಂದ್ಯದ ಐದನೇ ದಿನ ಮೊಹಮ್ಮದ್ ಶಮಿ ಮತ್ತು ರವೀಂದ್ರ ಜಡೇಜಾ ಮಾರಕ ಬೌಲಿಂಗ್ ಮಾಡಿ 9 ವಿಕೆಟ್ ಪಡೆದು ತಂಡಕ್ಕೆ ಗೆಲುವು ತಂದುಕೊಟ್ಟರು. 

ಮೊದಲ ಇನ್ನಿಂಗ್ಸ್ ಪ್ರಾರಂಭಿಸಿದ್ದ ಟೀಂ ಇಂಡಿಯಾ 502 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ಆಫ್ರಿಕಾ 431 ರನ್ ಗಳಿಗೆ ಆಲೌಟ್ ಆಯಿತು. ನಂತರ 71 ರನ್ ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ 323 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡು ಆಫ್ರಿಕಾಗೆ 395 ರನ್ ಗಳ ಗುರಿ ನೀಡಿತ್ತು. 

ಕೊನೆಯ ದಿನ ಈ ಬೃಹತ್ ಮೊತ್ತ ಬೆನ್ನಟ್ಟಿದ ಆಫ್ರಿಕಾಗೆ ಟೀಂ ಇಂಡಿಯಾ ಬೌಲರ್ ಗಳು ಶಾಕ್ ನೀಡಿದರು. ಕೇವಲ 191 ರನ್ ಗಳಿಗೆ ಆಫ್ರಿಕಾ ತಂಡವನ್ನು ಆಲೌಟ್ ಮಾಡಿದ್ದು ಇದರೊಂದಿಗೆ ಭಾರತ 203 ರನ್ ಗಳ ಬೃಹತ್ ಗೆಲುವು ಸಾಧಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.