ಸ್ವಂತ ನೆಲದಲ್ಲೇ ಪಾಕ್‌ಗೆ ಗರ್ವಭಂಗ: ಎಲ್ಲ ವಿಭಾಗಗಳಲ್ಲೂ ನಾವು ಎಡವಿದ್ದೇವೆ: ಪಾಕ್ ಕೋಚ್ ಮಿಸ್ಬಾ ಉಲ್ ಹಕ್
ಶ್ರೀಲಂಕಾ ವಿರುದ್ಧದ ಟಿ-20 ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾದ ಪಾಕಿಸ್ತಾನ ಕ್ರಿಕೆಟ್ ತಂಡ ಎಲ್ಲ ವಿಭಾಗಗಳಲ್ಲೂ ಎಡವಿದೆ ಎಂದು ಪಾಕಿಸ್ತಾನ ತಂಡದ ಕೋಚ್ ಮಿಸ್ಬಾ ಉಲ್ ಹಕ್ ತಿಳಿಸಿದ್ದಾರೆ.

ಲಾಹೋರ್: ಶ್ರೀಲಂಕಾ ವಿರುದ್ಧದ ಟಿ-20 ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾದ ಪಾಕಿಸ್ತಾನ ಕ್ರಿಕೆಟ್ ತಂಡ ಎಲ್ಲ ವಿಭಾಗಗಳಲ್ಲೂ ಎಡವಿದೆ ಎಂದು ಪಾಕಿಸ್ತಾನ ತಂಡದ ಕೋಚ್ ಮಿಸ್ಬಾ ಉಲ್ ಹಕ್ ತಿಳಿಸಿದ್ದಾರೆ.
ಎರಡೂ ತಂಡಗಳ ಪ್ರದರ್ಶನ ಆಟದ ಗುಣ ಮಟ್ಟವನ್ನು ತಿಳಿಸುತ್ತದೆ. ಆತಿಥೇಯ ತಂಡದ ಸ್ಟಾರ್ ಆಟಗಾರರು ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದು, ತಂಡಕ್ಕೆ ಪೆಟ್ಟು ಬಿದ್ದಿದೆ ಎಂದಿದ್ದಾರೆ.
ಪಾಕ್ ಪ್ರವಾಸದಲ್ಲಿರುವ ಶ್ರೀಲಂಕಾ ಎರಡನೇ ಟಿ20 ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಎರಡು ಪಂದ್ಯ ಗೆದ್ದು ಶ್ರೀಲಂಕಾ ಸರಣಿ ಕೈವಶ ಮಾಡಿಕೊಂಡಿದೆ. ಇನ್ನು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅಗ್ರಸ್ಥಾನದಲ್ಲಿದ್ದ ಪಾಕ್ ಗೆ ಶ್ರೀಲಂಕಾ ದೊಡ್ಡ ಹೊಡೆತ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


