ಕಳಪೆ ಪ್ರದರ್ಶನ: ಡಕ್ ಔಟ್‍ನೊಂದಿಗೆ ದಿಲ್ಷಾನ್ ದಾಖಲೆ ಸರಿಗಟ್ಟಿದ ಉಮರ್ ಅಕ್ಮಲ್
ಪಾಕಿಸ್ತಾನ ತಂಡದ ಉಮರ್ ಅಕ್ಮಲ್ ಅವರ ಕಳಪೆ ಪ್ರದರ್ಶನ ಮುಂದುವರಿದಿದ್ದು, ಶ್ರೀಲಂಕಾ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲೂ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ. ಆ ಮೂಲಕ ಶ್ರೀಲಂಕಾದ ಮಾಜಿ ಆಟಗಾರ ತಿಲಕರತ್ನೆ ದಿಲ್ಷಾನ್ ಅವರ ಜತೆ ಅನಗತ್ಯ ದಾಖಲೆಗೆ ಅಕ್ಮಲ್ ಭಾಜನರಾಗಿದ್ದಾರೆ.

ಲಾಹೋರ್: ಪಾಕಿಸ್ತಾನ ತಂಡದ ಉಮರ್ ಅಕ್ಮಲ್ ಅವರ ಕಳಪೆ ಪ್ರದರ್ಶನ ಮುಂದುವರಿದಿದ್ದು, ಶ್ರೀಲಂಕಾ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲೂ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ. ಆ ಮೂಲಕ ಶ್ರೀಲಂಕಾದ ಮಾಜಿ ಆಟಗಾರ ತಿಲಕರತ್ನೆ ದಿಲ್ಷಾನ್ ಅವರ ಜತೆ ಅನಗತ್ಯ ದಾಖಲೆಗೆ ಅಕ್ಮಲ್ ಭಾಜನರಾಗಿದ್ದಾರೆ.
ಉಮರ್ ಅಕ್ಮಲ್ ಅವರು ಟಿ-20 ಕ್ರಿಕೆಟ್ ನಲ್ಲಿ 19 ಬಾರಿ ಶೂನ್ಯಕ್ಕೆ ಔಟ್ ಆಗಿರುವ ದಿಲ್ಷಾನ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಮೊದಲನೇ ಪಂದ್ಯದಲ್ಲಿ ಡಕ್ ಔಟ್ ಆಗುವ ಮೂಲಕ ಅಕ್ಮಲ್ ಅವರು ಪಾಕ್ ಮಾಜಿ ಆಟಗಾರ ಶಾಹಿದ್ ಅಫ್ರಿದಿ ಅವರನ್ನು ಹಿಂದಿಕ್ಕಿದ್ದರು.
ಈ ಪಂದ್ಯದಲಿ ಪಾಕಿಸ್ತಾನ ತಂಡ 35 ರನ್‍ಗಳಿಂದ ಶ್ರೀಲಂಕಾ ವಿರುದ್ಧ ಸೋತು ಚುಟುಕು ಸರಣಿಯನ್ನು 0-2 ಅಂತರದಲ್ಲಿ ಬಿಟ್ಟುಕೊಟ್ಟಿತು. ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಶ್ರೀಲಂಕಾ ತಂಡ ಮೂರು ಪಂದ್ಯಗಳ ಟಿ-20 ಸರಣಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


