ಗಂಗೂಲಿಯ ಮತ್ತೊಂದು ದಾಖಲೆ ಸರಿಗಟ್ಟಿದ್ದ ವಿರಾಟ್ ಕೊಹ್ಲಿ!
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ಸಾಧನೆ ಮಾಡಿದ್ದಾರೆ. 50 ಟೆಸ್ಟ್ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ ಭಾರತದ ಎರಡನೇ ಕ್ಯಾಪ್ಟನ್ ಎಂಬ ಶ್ರೇಯಸ್ಸಿಗೆ ಪಾತ್ರರಾಗಿದ್ದಾರೆ.

ಮಹಾರಾಷ್ಟ್ರ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ಸಾಧನೆ ಮಾಡಿದ್ದಾರೆ. 50 ಟೆಸ್ಟ್ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ ಭಾರತದ ಎರಡನೇ ಕ್ಯಾಪ್ಟನ್ ಎಂಬ ಶ್ರೇಯಸ್ಸಿಗೆ ಪಾತ್ರರಾಗಿದ್ದಾರೆ.
ಪುಣೆಯಲ್ಲಿ ಭಾರತ- ದಕ್ಷಿಣ ಆಫ್ರಿಕಾ ನಡುವಣ ಎರಡನೇ ಟೆಸ್ಟ್ ಪಂದ್ಯದೊಂದಿಗೆ ಈ ಸಾಧನೆ ಮಾಡಿರುವ ವಿರಾಟ್ ಕೊಹ್ಲಿ, ಸೌರವ್ ಗಂಗೂಲಿ ದಾಖಲೆಯನ್ನು ಸರಿಗಟ್ಟಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ, ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.ಧೋನಿ ನಾಯಕತ್ವದಲ್ಲಿನ ಟೀಂ ಇಂಡಿಯಾ ಟೆಸ್ಟ್ ಪಂದ್ಯಗಳಲ್ಲಿ 60 ಪಂದ್ಯಗಳನ್ನು ಆಡಿದೆ. ಈ ವರ್ಷದ ಆರಂಭದಲ್ಲಿ ಧೋನಿ ನಾಯಕತ್ವದಲ್ಲಿದ್ದ ಹೆಚ್ಚು ಗೆಲುವು ಪಡೆದ ದಾಖಲೆಯನ್ನು ವಿರಾಟ್ ಕೊಹ್ಲಿ ಸರಿಗಟ್ಟಿದ್ದರು.
30 ವರ್ಷದ ಕೊಹ್ಲಿ ನಾಯಕತ್ವದಲ್ಲಿನ ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ 27ನೇ ಗೆಲುವು ಸಾಧಿಸುವ ಮೂಲಕ ಧೋನಿ ಸಾಧನೆಯನ್ನು ಸರಿಗಟ್ಟಲಾಗಿತ್ತು. ನಾಯಕನಾಗಿ 28 ಟೆಸ್ಟ್ ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಗೆಲ್ಲಿಸಿರುವ ದಾಖಲೆ ಕೊಹ್ಲಿ ಹೆಸರಿನಲ್ಲಿದೆ.
ಧೋನಿ ನಾಯಕತ್ವದಲ್ಲಿ ಆಡಿದ 60 ಟೆಸ್ಟ್ ಪಂದ್ಯಗಳ ಪೈಕಿ 27 ಪಂದ್ಯಗಳಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದ್ದರೆ, ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆಡಿದ 49 ಪಂದ್ಯಗಳ ಪೈಕಿ 29 ರಲ್ಲಿ ಗೆಲುವು ಸಾಧಿಸಲಾಗಿದೆ. ವಿದೇಶಗಳಲ್ಲಿ ಹೆಚ್ಚು ಪಂದ್ಯವನ್ನು ಗೆಲ್ಲಿಸಿದ ಕ್ಯಾಪ್ಟನ್ ಎಂಬ ಸಾಧನೆಯೂ ಕೊಹ್ಲಿ ಅವರದ್ದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


