ದಕ್ಷಿಣ ಆಫ್ರಿಕಾ ವಿರುದ್ಧ 2ನೇ ಶತಕ ಸಿಡಿಸಿದ ಕನ್ನಡಿಗ ಮಾಯಾಂಕ್ ಅಗರವಾಲ್!
ದಕ್ಷಿಣ ಆಫ್ರಿಕಾದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ಆಟಗಾರ ಮಾಯಾಂಕ್ ಅಗರವಾಲ್ ಶತಕ ಬಾರಿಸಿದ್ದಾರೆ.

ಪುಣೆ: ದಕ್ಷಿಣ ಆಫ್ರಿಕಾದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ಆಟಗಾರ ಮಾಯಾಂಕ್ ಅಗರವಾಲ್ ಶತಕ ಬಾರಿಸಿದ್ದಾರೆ.
ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಆರಂಭಿಕರಾಗಿ ಕಣಕ್ಕಿಳಿದ ಮಾಯಾಂಕ್ ಅಗರವಾಲ್ 195 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 16 ಬೌಂಡರಿ ಸೇರಿದಂತೆ 108 ರನ್ ಬಾರಿಸಿದರು. ಈ ಮೂಲಕ ಟೆಸ್ಟ್ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 2ನೇ ಶತಕ ಸಿಡಿಸಿದ್ದಾರೆ.
ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಮಾಯಾಂಕ್ ಅಗರವಾಲ್ 215 ರನ್ ಬಾರಿಸಿ ಮೊದಲ ಶತಕ ಸಿಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


