ಕ್ರಿಕೆಟ್

26ನೇ ಶತಕ ಸಿಡಿಸಿದ ವಿರಾಟ್ ಕೊಹ್ಲಿ, 10 ತಿಂಗಳ ನಂತರ ಮೊದಲ ಟೆಸ್ಟ್ ಶತಕ!

ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ಇದು 10 ತಿಂಗಳ ನಂತರ ಕೊಹ್ಲಿ ಬ್ಯಾಟ್ ನಿಂದ ಸಿಡಿಸಿದ ಮೊದಲ ಟೆಸ್ಟ್ ಶತಕವಾಗಿದೆ.

26ನೇ ಶತಕ ಸಿಡಿಸಿದ ವಿರಾಟ್ ಕೊಹ್ಲಿ, 10 ತಿಂಗಳ ನಂತರ ಮೊದಲ ಟೆಸ್ಟ್ ಶತಕ!
ವಿರಾಟ್ ಕೊಹ್ಲಿ
Published On :

ಪುಣೆ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ಇದು 10 ತಿಂಗಳ ನಂತರ ಕೊಹ್ಲಿ ಬ್ಯಾಟ್ ನಿಂದ ಸಿಡಿಸಿದ ಮೊದಲ ಟೆಸ್ಟ್ ಶತಕವಾಗಿದೆ. 

ಎರಡನೇ ದಿನದಾಟ ಆರಂಭಿಸಿದ ಕೊಹ್ಲಿ ಆಫ್ರಿಕಾ ಬೌಲರ್ ಗಳನ್ನು ದಂಡಿಸಿಶತಕ ಸಿಡಿಸಿದರು. 183 ಎಸತೆಗಳಲ್ಲಿ ಕೊಹ್ಲಿ 16 ಬೌಂಡರಿ ನೆರವಿನಿಂದ 104 ರನ್ ಬಾರಿಸಿದ್ದಾರೆ. ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಒಟ್ಟಾರೆ 69ನೇ ಶತಕ ಇದಾಗಿದೆ. ಜೊತೆಗೆ ಭಾರತದ ನೆಲದಲ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ ಕೊಹ್ಲಿ ಬಾರಿಸಿದ 12ನೇ ಶತಕ ಸಹ ಇದಾಗಿದೆ. 

ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 3 ವಿಕೆಟ್ ನಷ್ಟಕ್ಕೆ 356 ರನ್ ಬಾರಿಸಿ ಬೃಹತ್ ಮೊತ್ತ ಕಲೆಹಾಕುವ ಸೂಚನೆ ನೀಡಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.