ಅಶ್ವಿನ್ ಬೌಲಿಂಗ್‌ಗೆ ಕಕ್ಕಾಬಿಕ್ಕಿಯಾದ ಡಿ ಕಾಕ್, ಅಂಪೈರ್ ಔಟ್ ಕೊಟ್ರು ನಿಂತೆ ಇದ್ದಿದ್ದೇಕೆ? ವಿಡಿಯೋ ವೈರಲ್!
ಟೀಂ ಇಂಡಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆಫ್ರಿಕಾ ಬ್ಯಾಟ್ಸ್ ಮನ್ ಕ್ವಿಂಟನ್ ಡಿ ಕಾಕ್ ಆರ್ ಅಶ್ವಿನ್ ಬೌಲಿಂಗ್ ಗೆ ಸ್ವಲ್ಪ ಹೊತ್ತು ತಬ್ಬಿಬ್ಬಾಗಿ ನಿಂತಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪುಣೆ: ಟೀಂ ಇಂಡಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆಫ್ರಿಕಾ ಬ್ಯಾಟ್ಸ್ ಮನ್ ಕ್ವಿಂಟನ್ ಡಿ ಕಾಕ್ ಆರ್ ಅಶ್ವಿನ್ ಬೌಲಿಂಗ್ ಗೆ ಸ್ವಲ್ಪ ಹೊತ್ತು ತಬ್ಬಿಬ್ಬಾಗಿ ನಿಂತಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪುಣೆ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ 6 ವಿಕೆಟ್ ಕಳೆದುಕೊಂಡಿದ್ದ ಸಂದರ್ಭದಲ್ಲಿ ನಾಯಕ ಡುಪ್ಲೇಸಿಸ್ ಜೊತೆ ಸೇರಿ ಉತ್ತಮ ಜೊತೆಯಾಟವಾಡುತ್ತಿದ್ದ ಡಿ ಕಾಕ್ ಅಶ್ವಿನ್ ಬೌಲಿಂಗ್ ನಲ್ಲಿ ಬೌಲ್ಡ್ ಆಗಿದ್ದರು. ಈ ವೇಳೆ ಅಂಪೈರ್ ಔಟ್ ನೀಡಿದರು. ಇದರಿಂದ ಕಕ್ಕಾಬಿಕ್ಕಿಯಾದ ಡಿ ಕಾಕ್ ಕೊಂಚ ಸಮಯ ಮೈದಾನದಲ್ಲೇ ಉಳಿದರು.
ನಂತರ ಮೈದಾನದಲ್ಲಿ ಅಳವಡಿಸಿದ್ದ ಡಿಸ್‌ಪ್ಲೇನಲ್ಲಿ ರಿಪ್ಲೇ ದೃಶ್ಯಗಳನ್ನು ನೋಡಿದ ನಂತರ ಡಿಕಾಕ್ ಪೆಲಿವಿಯನ್ ಕಡೆ ಹೋದರು. ಸದ್ಯ ಈ ವಿಡಿಯೋ ಇದೀಗ ವೈರಲ್ ಆಗಿದೆ.
ಪುಣೆಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 137 ರನ್ ಗಳಿಂದ ಗೆಲುವಿನ ನಗೆ ಬೀರಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ 601 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿತ್ತು. ನಂತರ ಆಫ್ರಿಕಾ ಮೊದಲ ಇನ್ನಿಂಗ್ಸ್ ನಲ್ಲಿ 275 ರನ್ ಗಳಿಗೆ ಆಲೌಟ್ ಆಗಿ ಫಾಲೋ ಆನ್ ಗೆ ಸಿಲುಕಿತ್ತು. ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಫ್ರಿಕಾ 189 ರನ್ ಗಳಿಗೆ ಆಲೌಟ್ ಆಗಿ ಭಾರತಕ್ಕೆ ಶರಣಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


