ಸಾಧಾರಣ ರನ್‍ಗೆ ಕುಸಿದ ಭಾರತ ವನಿತೆಯರು
ಮರಿಜಾನ್ನೆ ಕಪ್ (20 ಕ್ಕೆ 3) ಅವರ ಮಾರಕ ದಾಳಿಗೆ ನಲುಗಿದ ಭಾರತ ಮಹಿಳಾ ತಂಡ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಕ್ಕೆ ಸಾಧಾರಣ ಗುರಿ ನೀಡಿದೆ.

ವಡೋದರ: ಮರಿಜಾನ್ನೆ ಕಪ್ (20 ಕ್ಕೆ 3) ಅವರ ಮಾರಕ ದಾಳಿಗೆ ನಲುಗಿದ ಭಾರತ ಮಹಿಳಾ ತಂಡ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಕ್ಕೆ ಸಾಧಾರಣ ಗುರಿ ನೀಡಿದೆ. ಇಲ್ಲಿನ ರಿಲೆಯನ್ಸ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 45.5 ಓವರ್ ಗಳಲ್ಲಿ ತನ್ನೆಲ್ಲ ವಿಕೆಟ್‍ಗಳನ್ನು ಕಳೆದುಕೊಂಡು 146 ರನ್ ಗಳಿಸಿತು.
ಆ ಮೂಲಕ ಪ್ರವಾಸಿ ತಂಡಕ್ಕೆ 147 ರನ್ ಗುರಿ ನೀಡಿತು. ಬ್ಯಾಟಿಂಗ್ ಮಾಡಿದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಪ್ರಿಯಾ ಪೂನಿಯಾ(0) ಹಾಗೂ ಜೆಮಿಮಾ ರೋಡ್ರಿಗಸ್(3) ಅವರು ತಂಡದ ಮೊತ್ತ ಐದು ರನ್ ಆಗುವಷ್ಟರಲ್ಲಿ ವಿಕೆಟ್ ಒಪ್ಪಿಸಿದರು. ಪೂನಮ್ ರಾವತ್(15) ಹಾಗೂ ನಾಯಕಿ ಮಿಥಾಲಿ ರಾಜ್(11) ಬಹುಬೇಗ ಔಟ್ ಆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


