ಡೈವ್ ಕ್ಯಾಚ್ ಹಿಡಿದು ಆಟಕ್ಕೆ ವಯಸ್ಸಿನ ಮಿತಿಯಿಲ್ಲವೆಂದು ತೋರಿಸಿದ ವಿವಿಎಸ್ ಲಕ್ಷ್ಮಣ್, ವಿಡಿಯೋ!
ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಮೈದಾನದಲ್ಲಿ ಡೈವ್ ಮಾಡಿ ಅದ್ಭುತ ಕ್ಯಾಚ್ ಹಿಡಿದಿದ್ದು ಈ ಮೂಲಕ ಆಟಕ್ಕೆ ವಯಸ್ಸಿನ ಮಿತಿಯಿಲ್ಲ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಮೈದಾನದಲ್ಲಿ ಡೈವ್ ಮಾಡಿ ಅದ್ಭುತ ಕ್ಯಾಚ್ ಹಿಡಿದಿದ್ದು ಈ ಮೂಲಕ ಆಟಕ್ಕೆ ವಯಸ್ಸಿನ ಮಿತಿಯಿಲ್ಲ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.
ಪುಣೆಯಲ್ಲಿ ನಡೆದ ಟೆಸ್ಟ್ ಪಂದ್ಯದ ವೇಳೆ ಟೀಂ ಇಂಡಿಯಾ ಮಾಜಿ ಆಟಗಾರರು ಮೈದಾನದಲ್ಲಿ ಕಾಮೆಂಟ್ರಿ ಕೊಡುವ ವೇಳೆ ಬ್ಯಾಟಿಂಗ್ ಮಾಡಿದ್ದರು. ಈ ವೇಳೆ ಆಫ್ ಲೇಗ್ ನಲ್ಲಿ ನಿಂತಿದ್ದ ಲಕ್ಷ್ಮಣ್ ಡೈವ್ ಮಾಡಿ ಪಿಚ್ ಕ್ಯಾಚ್ ಹಿಡಿದಿದ್ದರು.
ಇಲ್ಲಿ ಲಕ್ಷ್ಮಣ್ ಡೈವ್ ಮಾಡಿ ಕ್ಯಾಚ್ ಹಿಡಿದಿರುವುದನ್ನು ಮೈದಾನದಲ್ಲಿದ್ದ ಮಾಜಿ ಕ್ರಿಕೆಟಿಗರು ಖುಷಿ ಪಟ್ಟು ಸಂಭ್ರಮಿಸಿದ ವಿಡಿಯೋ ಇದೀಗ ವೈರಲ್ ಆಗಿದೆ.
ಪುಣೆಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಇನ್ನಿಂಗ್ಸ್ ಮತ್ತು 137 ರನ್ ಗಳಿಂದ ಅದ್ಭುತ ಗೆಲುವು ಸಾಧಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


