ರಾಂಚಿಯಲ್ಲಿ ಎಂಎಸ್ ಧೋನಿಗೆ ಟೀಂ ಇಂಡಿಯಾದಿಂದ ಗೆಲುವಿನ ಉಡುಗೊರೆ, ಅದು ಏನು ಅಂತೀರಾ?
ಇಲ್ಲಿನ ಜೆಎಸ್‍ಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಕೊಹ್ಲಿ ಪಡೆ ಡ್ರೆಸ್ಸಿಂಗ್ ಕೊಠಡಿಯಲ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕಾಣಿಸಿಕೊಂಡರು.

ರಾಂಚಿ: ಇಲ್ಲಿನ ಜೆಎಸ್‍ಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಕೊಹ್ಲಿ ಪಡೆ ಡ್ರೆಸ್ಸಿಂಗ್ ಕೊಠಡಿಯಲ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕಾಣಿಸಿಕೊಂಡರು.
ಚೊಚ್ಚಲ ಟೆಸ್ಟ್ ಪಂದ್ಯವಾಡಿದ ಜಾರ್ಖಂಡ್ ರಾಜ್ಯದ ಶಹಬಾಜ್ ನದೀಮ್ ಅವರ ಬಳಿ ಕೆಲಕಾಲ ಮಾತನಾಡಿದ ಧೋನಿ, ಉಪಯುಕ್ತ ಸಲಹೆಗಳನ್ನು ನೀಡಿದರು.
ನಾಲ್ಕನೇ ದಿನ ಭಾರತ ಕೇವಲ 10 ನಿಮಿಷಗಳಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಆಲೌಟ್ ಮಾಡಿತು. ಆ ಮೂಲಕ ಇನಿಂಗ್ಸ್ ಹಾಗೂ 202 ರನ್‍ಗಳ ಜಯ ದಾಖಲಿಸಿ 3-0 ಅಂತರದಲ್ಲಿ ಟೆಸ್ಟ್ ಸರಣಿ ತನ್ನದಾಗಿಸಿಕೊಂಡಿತು.
ಟೀಮ್ ಇಂಡಿಯಾ ಮುಖ್ಯ ಕೋಚ್ ರವಿಶಾಸ್ತ್ರಿ ಅವರು ಧೋನಿ ಅವರೊಂದಿಗಿನ ಫೋಟೊವನ್ನು ತಮ್ಮ ಅಧಿಕೃತ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಅದ್ಭುತ ಟೆಸ್ಟ್ ಸರಣಿ ಜಯದ ಬಳಿಕ ಭಾರತೀಯ ನಿಜವಾದ ದಂತಕತೆ ನೋಡಿದ್ದಕ್ಕೆ ತುಂಬಾ ಸಂತಸವಾಯಿತು ಎಂದು ಶೀರ್ಷಿಕೆ ನೀಡಿದ್ದಾರೆ.
ಮಹೇಂದ್ರ ಸಿಂಗ್ ಧೋನಿ 2014ರಲ್ಲಿಯೇ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದರು. ಜುಲೈ 14 ರಂದು ಮುಕ್ತಾಯವಾಗಿದ್ದ ಐಸಿಸಿ ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ದಿಂದ ದೂರ ಉಳಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


