2ನೇ ಟೆಸ್ಟ್ : ಭೋಜನ ವಿರಾಮದ ಹೊತ್ತಿಗೆ ವೆಸ್ಟ್ ಇಂಡೀಸ್ ವೆಸ್ಟ್ ಇಂಡೀಸ್ 4 ವಿಕೆಟ್ ನಷ್ಟಕ್ಕೆ 145 ರನ್
ಟೀಮ್ ಇಂಡಿಯಾ ನೀಡಿರುವ 468 ರನ್‌ಗಳ ಬೃಹತ್ ಗೆಲುವಿನ ಗುರಿ ಬೆನ್ನತ್ತಿರುವ ಆತಿಥೇಯ ವೆಸ್ಟ್‌ಇಂಡೀಸ್, ಇಲ್ಲಿ ನಡೆಯುತ್ತಿರುವ ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ಊಟದ ವಿರಾಮದ ಹೊತ್ತಿಗೆ 40 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 145 ರನ್ ಗಳಿಸಿದೆ.

ಕಿಂಗ್ ಸ್ಟನ್ : ಟೀಮ್ ಇಂಡಿಯಾ ನೀಡಿರುವ 468 ರನ್‌ಗಳ ಬೃಹತ್ ಗೆಲುವಿನ ಗುರಿ ಬೆನ್ನತ್ತಿರುವ ಆತಿಥೇಯ ವೆಸ್ಟ್‌ಇಂಡೀಸ್, ಇಲ್ಲಿ ನಡೆಯುತ್ತಿರುವ ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ಊಟದ ವಿರಾಮದ ಹೊತ್ತಿಗೆ 40 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 145 ರನ್ ಗಳಿಸಿದೆ. ಈ ಮೂಲಕ ಟೀಂ ಇಂಡಿಯಾ ಮತ್ತೊಂದು ಕ್ಲೀನ್ ಸ್ವೀಪ್ ನತ್ತ ದಾಪುಗಾಲು ಹಾಕಿದೆ.
ವೆಸ್ಟ್ ಇಂಡೀಸ್ ಗೆಲ್ಲಲು ಆರು ವಿಕೆಟ್ ಗಳಲ್ಲಿ 323 ರನ್ ಗಳಿಸಬೇಕಾಗಿದೆ. ದಿನದಾಟ ಮುಂದುವರಿಸಿದ ವಿಂಡೀಸ್‌ಗೆ ಆರಂಭದಲ್ಲೇ ಆಘಾತ ಎದುರಾಗಿತ್ತು. ಅನಾರೋಗ್ಯಕ್ಕೆ ಒಳಗಾದ ಬ್ರಾವೋ (23) ನಿವೃತ್ತಿಯನ್ನು ಹೊಂದಿದರು. ಬ್ರಾವೋ ಸ್ಥಾನಕ್ಕೆ ಜರ್ಮೈನ್ ಬ್ಲ್ಯಾಕ್‌ವುಡ್ ಬದಲಿ ಆಟಗಾರನಾಗಿ ಸೇರಿಕೊಂಡರು.
ಈ ಹಂತದಲ್ಲಿ ಜತೆಗೂಡಿದ ಶಮರ್ ಬ್ರೂಕ್ಸ್ ಹಾಗೂ ರೋಸ್ಟನ್ ಚೇಸ್ (12) ಅಲ್ಪ ಹೊತ್ತು ಪ್ರತಿರೋಧ ಒಡ್ಡಿದರು. ಈ ಜೋಡಿಯನ್ನು ರವೀಂದ್ರ ಜಡೇಜಾ ಹೊರದಬ್ಬಿದರು. ಬೆನ್ನಲ್ಲೇ ಶಿಮ್ರಾ ಹೆಟ್ಮಾಯೆರ್ (1) ಓಟಕ್ಕೆ ಇಶಾಂತ್ ಶರ್ಮಾ ಬ್ರೇಕ್ ಹಾಕಿದರು. ಇದೀಗ ಕ್ರೀಸಿನಲ್ಲಿರುವ ಶಮರ್ ಬ್ರೂಕ್ಸ್ (36 ) ಹಾಗೂ ಜರ್ಮೈನ್ ಬ್ಲ್ಯಾಕ್‌ವುಡ್ (33) ಭಾರತದ ಗೆಲುವನ್ನು ವಿಳಂಬ ಮಾಡುವ ಪ್ರಯತ್ನದಲ್ಲಿದ್ದಾರೆ.
ಭಾರತದ ಪರ ಇಶಾಂತ್ ಶರ್ಮಾ 28 ರನ್ ಗಳಿಗೆ 2 ವಿಕೆಟ್ ಗಳನ್ನು ಪಡೆದರೆ ರವೀಂದ್ರ ಜಡೇಜಾ 33 ರನ್ ಗಳಿಗೆ 1 ವಿಕೆಟ್ ಪಡೆದುಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


