ಮಾಜಿ ಟೀಂ ಇಂಡಿಯಾ ನಾಯಕಿ ಮಿಥಾಲಿ ರಾಜ್ ಟಿ20 ಕ್ರಿಕೆಟ್‌ಗೆ ನಿವೃತ್ತಿ!
ಟೀಂ ಇಂಡಿಯಾ ಮಹಿಳಾ ತಂಡದ ಹಿರಿಯ ಆಟಗಾರ್ತಿ ಮಿಥಾಲಿ ರಾಜ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.

ಮುಂಬೈ: ಟೀಂ ಇಂಡಿಯಾ ಮಹಿಳಾ ತಂಡದ ಹಿರಿಯ ಆಟಗಾರ್ತಿ ಮಿಥಾಲಿ ರಾಜ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.
2021ರಲ್ಲಿ ಏಕದಿನ ಮಹಿಳಾ ವಿಶ್ವಕಪ್ ಟೂರ್ನಿ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಏಕದಿನ ಕ್ರಿಕೆಟ್ ಕುರಿತು ಗಮನ ಹರಿಸುವ ಸಲುವಾಗಿ ಟಿ20 ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿರುವುದಾಗಿ ಮಿಥಾಲಿ ರಾಜ್ ಹೇಳಿದ್ದಾರೆ.
ಮಿಥಾಲಿ ರಾಜ್ 32 ಟಿ20 ಪಂದ್ಯಗಳಿಗೆ ಸಾರಥ್ಯ ವಹಿಸಿದ್ದರು. ಇದರ ಜೊತೆಗೆ 2012ರ ಶ್ರೀಲಂಕಾ, 2014ರ ಬಾಂಗ್ಲಾದೇಶ ಹಾಗೂ 2016ರಲ್ಲಿ ಭಾರತದಲ್ಲಿ ನಡೆದ ವಿಶ್ವ ಟಿ20 ಮಹಿಳಾ ವಿಶ್ವಕಪ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.
ಒಟ್ಟು 88 ಟಿ20 ಪಂದ್ಯಗಳನ್ನಾಡಿರುವ ಮಿಥಾಲಿ ರಾಜ್ 2364 ರನ್ ಗಳಿಸಿದ್ದಾರೆ. ಇದು ಭಾರತೀಯ ಮಹಿಳಾ ಆಟಗಾರ್ತಿ ದಾಖಲಿಸಿದ ಗರಿಷ್ಠ ಮೊತ್ತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


