ಈತ ಟೀಂ ಇಂಡಿಯಾಗೆ ವರದಾನ: ಇರ್ಫಾನ್ ಪಠಾಣ್ ಕೊಂಡಾಡಿದ ಸ್ಟಾರ್ ವೇಗಿ ಇವರೇ?
ಟೀಂ ಇಂಡಿಯಾದ ಮಾಜಿ ವೇಗಿ ಇರ್ಫಾನ್ ಪಠಾಣ್ ಭಾರತದ ಯುವ ವೇಗಿಯೋರ್ವನನ್ನು ಕೊಂಡಾಡಿದ್ದಾರೆ.

ಕೊಲ್ಕತಾ: ಟೀಂ ಇಂಡಿಯಾದ ಮಾಜಿ ವೇಗಿ ಇರ್ಫಾನ್ ಪಠಾಣ್ ಭಾರತದ ಯುವ ವೇಗಿಯೋರ್ವನನ್ನು ಕೊಂಡಾಡಿದ್ದಾರೆ.
ಭಾರತ ತಂಡಕ್ಕೆ ವೇಗಿ ಜಸ್ಪ್ರಿತ್ ಬುಮ್ರಾ ಅತ್ಯಂತ ಪ್ರಮುಖ ಆಟಗಾರ ಎಂಬುದನ್ನು ನಂಬಿರುವ ಮಾಜಿ ವೇಗಿ ಇರ್ಫಾನ್ ಪಠಾಣ್, ವೆಸ್ಟ್ ಇಂಡೀಸ್ ವಿರುದ್ಧದ ಅವರ ಹ್ಯಾಟ್ರಿಕ್ ವಿಕೆಟ್ ಸಾಧನೆ ಇದೇ ಕೊನೆಯಲ್ಲಾ ಎಂದು ಹೇಳಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಬುಮ್ರಾ ಅವರು ಹ್ಯಾಟ್ರಿಕ್ ಸೇರಿ ಒಟ್ಟು 13 ವಿಕೆಟ್‌ಗಳನ್ನು ಕಬಳಿಸಿದ್ದರು. ಇವರ ಮಾರಕ ದಾಳಿಯ ನೆರವಿನಿಂದ ಭಾರತ ಎರಡನೇ ಪಂದ್ಯ ಗೆದ್ದು ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಆ ಮೂಲಕ ಭಾರತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ 120 ಅಂಕಗಳೊಂದಿಗೆ ಅಗ್ರ ಸ್ಥಾನ ಅಲಂಕರಿಸಿದೆ.
25 ರ ಪ್ರಾಯದ ಬುಮ್ರ ಅವರು ಎಲ್ಲ ಮಾದರಿಯಲ್ಲಿ ವಿಶ್ವ ಶ್ರೇಷ್ಠ ಬೌಲರ್ ಎಂದೆನಿಸಿಕೊಂಡಿದ್ದಾರೆ. ಬುಮ್ರಾ ಅವರು ಕಳೆದ ಎರಡು ದಿನಗಳ ಹಿಂದೆ ಹರಭಜನ್ ಸಿಂಗ್ ಹಾಗೂ ಇರ್ಪಾನ್ ಪಠಾಣ್ ಅವರ ಹ್ಯಾಟ್ರಿಕ್ ಕ್ಲಬ್‌ಗೆ ಸೇರ್ಪಡೆಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


