15 ವರ್ಷಗಳ ಹಳೆಯ ದಾಖಲೆ ಮುರಿದ ಆಫ್ಘಾನ್ ಸ್ಪಿನ್ನರ್ ರಶೀದ್ ಖಾನ್!
ಆಲ್‌ರೌಂಡರ್ ರಶೀದ್ ಖಾನ್ ಅವರು ವೃತ್ತಿ ಜೀವನದ ಮೊದಲ ಬಾರಿ ಅಫ್ಘಾನಿಸ್ತಾನ ಟೆಸ್ಟ್ ತಂಡವನ್ನು ಮುನ್ನಡೆಸಿದ್ದಾರೆ.

ಚಿತ್ತಗಾಂಗ್: ಆಲ್‌ರೌಂಡರ್ ರಶೀದ್ ಖಾನ್ ಅವರು ವೃತ್ತಿ ಜೀವನದ ಮೊದಲ ಬಾರಿ ಅಫ್ಘಾನಿಸ್ತಾನ ಟೆಸ್ಟ್ ತಂಡವನ್ನು ಮುನ್ನಡೆಸಿದ್ದಾರೆ.
ಆ ಮೂಲಕ ಟೆಸ್ಟ್ ತಂಡದ ನಾಯಕತ್ವ ವಹಿಸಿದ ವಿಶ್ವದ ಅತಿ ಕಿರಿಯ ನಾಯಕ ಎಂಬ ಹೆಗ್ಗಳಿಕೆಗೆ ರಶೀದ್ ಭಾಜನವಾಗುವ ಮೂಲಕ 15 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು.
ಇಂದು ಬಾಂಗ್ಲಾದೇಶ ವಿರುದ್ಧ ಆರಂಭವಾದ ಏಕೈಕ ಟೆಸ್ಟ್ ಪಂದ್ಯದಲ್ಲಿ ರಶೀದ್ ಖಾನ್ ಈ ದಾಖಲೆ ಮಾಡಿದ್ದಾರೆ. 2004ರಲ್ಲಿ ಈ ಸಾಧನೆ ಮಾಡಿದ್ದ ಜಿಂಬಾಬ್ವೆ ತಂಡದ ತಂತೆಂಡಾ ತೈಬು ಅವರ ದಾಖಲೆಯನ್ನು ಇವರು ಮುರಿದರು.
ತೈಬು ಅವರು 20 ವರ್ಷ 358 ದಿನಗಳಲ್ಲಿ ಜಿಂಬಾಂಬ್ವೆ ಟೆಸ್ಟ್ ತಂಡವನ್ನು ಮುನ್ನಡೆಸಿದ್ದರು. ಆದರೆ, ರಶೀದ್ ಖಾನ್ 20 ವರ್ಷ 350 ದಿನಗಳಲ್ಲಿ ವಯಸ್ಸಿನಲ್ಲಿ ಅಫ್ಘಾನಿಸ್ತಾನ ತಂಡದ ಸಾರಥ್ಯ ವಹಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


