ಸ್ಟಾರ್ಕ್ ಮಾರಣಾಂತಿಕ ಬೌಲಿಂಗ್‌ಗೆ ಒಡೆದ ರೂಟ್ 'ಅಬ್ಡೊಮಿನಲ್ ಗಾರ್ಡ್', ಕುಸಿದು ಬಿದ್ದ ಜೋ, ವಿಡಿಯೋ!
ಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಮಾರಣಾಂತಿಕ ಬೌಲಿಂಗ್‌ಗೆ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಅವರ ಅಬ್ಡೊಮಿನಲ್ ಗಾರ್ಡ್ ಒಡೆದು ಹೋಗಿದೆ.

ಮ್ಯಾಂಚೆಸ್ಟರ್: ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಮಾರಣಾಂತಿಕ ಬೌಲಿಂಗ್‌ಗೆ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಅವರ ಅಬ್ಡೊಮಿನಲ್ ಗಾರ್ಡ್ ಒಡೆದು ಹೋಗಿದೆ.
ಮಿಚೆಲ್ ಸ್ಟಾರ್ಕ್ ಗಂಟೆಗೆ 140 ಕಿ.ಮೀ ವೇಗದಲ್ಲಿ ಚೆಂಡನ್ನು ಎಸೆದಿದ್ದರು. ಈ ವೇಳೆ ರಕ್ಷಣಾತ್ಮಕ ಬ್ಯಾಟಿಂಗ್ ಮುಂದಾದಾಗ ಚೆಂಡು ನೇರವಾಗಿ ಅಬ್ಡೊಮಿನಲ್ ಗಾರ್ಡ್ ಗೆ ಬಿದ್ದಿದೆ. ಕೂಡಲೇ ನೋವಿನಿಂದ ರೂಟ್ ಕುಸಿದು ಬಿದ್ದರು.
ನಂತರ ಅಬ್ಡೊಮಿನಲ್ ಗಾರ್ಡ್ ತೆಗೆದು ನೋಡಿದಾಗ ಎರಡು ಚೂರಾಗಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೆಲಿಯಾ ಗೆಲುವು ಸಾಧಿಸಿದೆ. ಈ ಮೂಲಕ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಮುಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದರೆ ಸರಣಿ ಕೈವಶ ಮಾಡಿಕೊಳ್ಳಲಿದೆ. ಇನ್ನು ಇಂಗ್ಲೆಂಡ್ ಗೆದ್ದರೆ ಸರಣಿ ಸಮಬಲವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


