ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣಕ್ಕೆ ಅರುಣ್ ಜೇಟ್ಲಿ ಹೆಸರು, ಪೆವಿಲಿಯನ್ ಗೆ ಕೊಹ್ಲಿ ಹೆಸರು
ಇಲ್ಲಿನ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣಕ್ಕೆ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರ ಹೆಸರನ್ನಿಟ್ಟು ಡಿಡಿಸಿಎ ಗುರುವಾರ ಅಧಿಕೃತ ಘೋಷಣೆ ಮಾಡಿದೆ.

ನವದೆಹಲಿ: ಇಲ್ಲಿನ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣಕ್ಕೆ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರ ಹೆಸರನ್ನಿಟ್ಟು ಡಿಡಿಸಿಎ ಗುರುವಾರ ಅಧಿಕೃತ ಘೋಷಣೆ ಮಾಡಿದೆ.
ಇಲ್ಲಿನ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿನ ವೇಟ್‌ಲಿಫ್ಟಿಂಗ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೋಟ್ಲಾ ಅಂಗಳಕ್ಕೆ ಜೇಟ್ಲಿ ಅವರ ಹೆಸರನ್ನು ಇಡಲಾಯಿತು. ಅರುಣ್ ಜೇಟ್ಲಿ ಅವರು ಡಿಡಿಸಿಎ ಅಧ್ಯಕ್ಷರಾಗಿ 1999-2003ರ ವರೆಗೆ ಕಾರ್ಯ ನಿರ್ವಹಿಸಿದ್ದರು.
ಇದೇ ಸಮಾರಂಭದಲ್ಲಿ ಮೈದಾನದ ಒಂದು ಪೆವಿಲಿಯನ್ ಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಹೆಸರನ್ನು ಇಡಲಾಯಿತು.
ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರೈಲ್ವೇ ಸಚಿವ ಪಿಯೂಶ್ ಗೋಯಲ್, ಕ್ರೀಡಾ ಸಚಿವ ಕಿರಣ್ ರಿಜಿಜು ಮತ್ತು ಬಿಸಿಸಿಐನ ಹಾಲಿ ಮತ್ತು ಮಾಜಿ ಅಧಿಕಾರಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


