ವೃತ್ತಿ ಜೀವನದಲ್ಲೇ ಆರ್ಚರ್ ನಂಥ ಬೌಲರ್ ಎಲ್ಲೂ ನೋಡಿಲ್ಲ: ಸ್ಟೋಕ್ಸ್
ಚೊಚ್ಚಲ ಟೆಸ್ಟ್ ಸರಣಿಯಲ್ಲೇ 22 ವಿಕೆಟ್ ಕಬಳಿಸಿರುವ ಜೊಫ್ರಾ ಆರ್ಚರ್ ಅವರು ಮುಂಬರುವ 2021-22ರ ಸಾಲಿನಲ್ಲಿ ಆ್ಯಷಸ್ ಟ್ರೋಫಿ ಮರಳಿ ಪಡೆಯಲು ನೆರವಾಗಲಿದ್ದಾರೆ ಎಂದು ಇಂಗ್ಲೆಂಡ್ ಸ್ಟಾರ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಲಂಡನ್: ಚೊಚ್ಚಲ ಟೆಸ್ಟ್ ಸರಣಿಯಲ್ಲೇ 22 ವಿಕೆಟ್ ಕಬಳಿಸಿರುವ ಜೊಫ್ರಾ ಆರ್ಚರ್ ಅವರು ಮುಂಬರುವ 2021-22ರ ಸಾಲಿನಲ್ಲಿ ಆ್ಯಷಸ್ ಟ್ರೋಫಿ ಮರಳಿ ಪಡೆಯಲು ನೆರವಾಗಲಿದ್ದಾರೆ ಎಂದು ಇಂಗ್ಲೆಂಡ್ ಸ್ಟಾರ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭಾನುವಾರ ಮುಕ್ತಾಯವಾಗಿದ್ದ ಐದನೇ ಹಾಗೂ ಅಂತಿಮ ಪಂದ್ಯದಲ್ಲಿ ಇಂಗ್ಲೆಂಡ್ 135 ರನ್‌ಗಳಿಂದ ಆಸ್ಟ್ರೇಲಿಯಾವನ್ನು ಮಣಿಸಿತ್ತು. ಆ ಮೂಲಕ ಐದು ಪಂದ್ಯಗಳ ಆ್ಯಷಸ್ ಸರಣಿಯು 2-2 ಅಂತರದಲ್ಲಿ ಡ್ರಾ ಆಯಿತು. ಚೊಚ್ಚಲ ಟೆಸ್ಟ್ ಸರಣಿ ಆಡಿದ ಜೊಫ್ರಾ ಆರ್ಚರ್ ಅವರು 22 ವಿಕೆಟ್ ಕಿತ್ತು ಎಲ್ಲರ ಗಮನ ಸೆಳೆದಿದ್ದರು.
24ರ ಪ್ರಾಯದ ಜೊಫ್ರಾ ಆರ್ಚರ್ ಅವರು ಇಂಗ್ಲೆಂಡ್ ತಂಡಕ್ಕೆ ಪದಾರ್ಪಣೆ ಮಾಡುತ್ತಿದ್ದಂತೆ ಆಂಗ್ಲರು ಚೊಚ್ಚಲ ವಿಶ್ವಕಪ್ ಮುಡಿಗೇರಿಸಿಕೊಂಡರು. ಬಲಗೈ ವೇಗಿ ಆಡಿದ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ತಮ್ಮ ವೇಗ ಮತ್ತು ಸ್ವಿಂಗ್‌ನಿಂದ ಆಸ್ಟ್ರೇಲಿಯಾ ಬ್ಯಾಟ್ಸ್‌ಮನ್‌ಗಳಿಗೆ ಸಿಂಹ ಸ್ವಪ್ನರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


