ಕ್ರಿಕೆಟ್

ಕೊಹ್ಲಿ ಅರ್ಧ ಶತಕ: ಆಫ್ರಿಕಾ ವಿರುದ್ಧ ಟಿ20 ಪಂದ್ಯ ಗೆದ್ದ ಟೀಂ ಇಂಡಿಯಾ, 7 ವಿಕೆಟ್​ಗಳಿಂದ ಭರ್ಜರಿ ಜಯ!

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿತ್ತು. ಇದೀಗ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅರ್ಧ ಶತಕ ಸಿಡಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.

ಕೊಹ್ಲಿ ಅರ್ಧ ಶತಕ: ಆಫ್ರಿಕಾ ವಿರುದ್ಧ ಟಿ20 ಪಂದ್ಯ ಗೆದ್ದ ಟೀಂ ಇಂಡಿಯಾ, 7 ವಿಕೆಟ್​ಗಳಿಂದ ಭರ್ಜರಿ ಜಯ!
ಸಂಗ್ರಹ ಚಿತ್ರ
Published On :

ಮೊಹಾಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿತ್ತು. ಇದೀಗ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅರ್ಧ ಶತಕ ಸಿಡಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. 

ಮೊಹಾಲಿಯಲ್ಲಿ ಟಿ20 ಪಂದ್ಯ ನಡೆದಿದ್ದು ಮೊದಲ ಬ್ಯಾಟಿಂಗ್ ಮಾಡಿದ ಆಫ್ರಿಕಾ ತಂಡ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 149 ರನ್ ಪೇರಿಸಿತು. 150 ರನ್ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ಶಿಖರ್ ಧವನ್ ಮತ್ತು ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದರು.

ಇನ್ನು ಆರು ಎಸೆತಗಳು ಇರುವಾಗಲೇ ಟೀಂ ಇಂಡಿಯಾ 3 ವಿಕೆಟ್ ನಷ್ಟಕ್ಕೆ 151 ರನ್ ಪೇರಿಸಿದ 7 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

ಟೀಂ ಇಂಡಿಯಾ ಪರ ರೋಹಿತ್ ಶರ್ಮಾ 12, ಶಿಖರ್ ಧವನ್ 40, ವಿರಾಟ್ ಕೊಹ್ಲಿ ಅಜೇಯ 72 ಮತ್ತು ಶ್ರೇಯಸ್ ಅಯ್ಯರ್ ಅಜೇಯ 16 ರನ್ ಪೇರಿಸಿದ್ದಾರೆ.

ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇನ್ನು ಮೊದಲ ಪಂದ್ಯ ಮಳೆಯಿಂದ ರದ್ದಾಗಿದ್ದರಿಂದ ಬೆಂಗಳೂರಿನಲ್ಲಿ ನಡೆಯುವ ಮೂರನೇ ಟಿ20 ಪಂದ್ಯ ಉಭಯ ತಂಡಗಳಿಗೆ ಮುಖ್ಯವಾಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.