ಕೆಪಿಎಲ್ ಮ್ಯಾಚ್ ಫಿಕ್ಸಿಂಗ್; ಬೆಳಗಾವಿ ತಂಡದ ಮಾಲೀಕ ಸಿಸಿಬಿ ವಶಕ್ಕೆ
ಕ್ರಿಕೆಟ್ ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಬೆಳಗಾವಿ ಪ್ಯಾಂಥರ್ಸ್ ತಂಡ ಮಾಲೀಕ ಅಲಿ ಅಸ್ಫಾಕ್ ಅವರನ್ನು ಸಿಸಿಬಿ ಪೋಲೀಸರು ವಶಕ್ಕೆ ಪಡೆದಿದ್ದಾರೆ.

ಕ್ರಿಕೆಟ್ ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಬೆಳಗಾವಿ ಪ್ಯಾಂಥರ್ಸ್ ತಂಡ ಮಾಲೀಕ ಅಲಿ ಅಸ್ಫಾಕ್ ಅವರನ್ನು ಸಿಸಿಬಿ ಪೋಲೀಸರು ವಶಕ್ಕೆ ಪಡೆದಿದ್ದಾರೆ.
ಅಲಿ ಅಸ್ಫಾಕ್ ಮುಂಬೈನ ಬುಕ್ಕಿಗಳೊಡನೆ ಸಂಪರ್ಕದಲ್ಲಿದ್ದನೆಂದು ಗಮನಿಸಿದ ಪೋಲೀಸರು ಆತ ಕೆಪಿಎಲ್, ಐಸಿಎಲ್ ಹಾಗೂ ಅಂತರಾಷ್ಟ್ರೀಯ ಪಂದ್ಯಗಳನ್ನು ಫಿಕ್ಸ್ ಮಾಡುತ್ತಿದ್ದ ಎಂದಿದ್ದಾರೆ.
ಖಚಿತ ಮಾಹಿತಿ ಆಧಾರದಲ್ಲಿ ಅಲಿಯನ್ನು ವಶಕ್ಕೆ ಪಡೆದಿದ್ದು ಇನ್ನು ಕೆಲ ಆಟಗಾರರು ಹಾಗೂ ಉ:ಳಿದವರ ಬಗೆಗೆ ಸಹ ವಿಚಾರಣೆ ವೇಳೆ ಮಾಹಿತಿ ಬಹಿರಂಗವಾಗಲಿದೆ ಎನ್ನಲಾಗಿದೆ.
ತಮಿಳುನಾಡು ಪ್ರೀಮಿಯರ್ ಲೀಗ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಅಪರಿಚಿತರು ಪ್ರಮುಖ ಆಟಗಾರರ ಮೊಬೈಲ್ಗೆ ವಾಟ್ಸಪ್ ಸಂದೇಶ ಕಳಿಸಿದ ಕುರಿತಂತೆ ಬಿಸಿಸಿಐ ತನಿಖೆ ಪ್ರಾರಂಭಿಸಿದ ಬೆನ್ನಲ್ಲಿ ಮಹಿಳಾ ತಂಡದ ಆಟಗಾರ್ತಿಯೊಬ್ಬರು ಮ್ಯಾಚ್ ಫಿಕ್ಸಿಂಗ್ ನಲ್ಲಿ ಸಿಕ್ಕುಬಿದ್ದದ್ದನ್ನು ನಾವಿಲ್ಲಿ ಸ್ಮರಿಸಬಹುದು.
ಕರ್ನಾಟಕ ಪ್ರೀಮಿಯರ್ ಲೀಗ್ - ಕೆಪಿಎಲ್ ನಲ್ಲಿ ಸಹ ಫಿಕ್ಸಿಂಗ್ ನಡೆದಿದೆ ಎಂದು ಬಿಸಿಸಿಐಗೆ ಸುಳಿವು ಸಿಕ್ಕಿದ್ದು ಈ ಸಂಬಂಧ ಮಂಡಳಿ ಎರಡು ಡು ಕೆಪಿಎಲ್ ತಂಡಗಳ ಮೇಲೆ ತನಿಖೆ ಕೈಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


