ಪಾಕ್‌ಗೆ ಬರಲು ಶ್ರೀಲಂಕಾ ಆಟಗಾರರು ಹಿಂದೇಟು ಹಾಕಲು ಐಪಿಎಲ್ ಕಾರಣ: ಭಾರತವನ್ನು ದೂಷಿಸಿದ ಆಫ್ರಿದಿ, ವಿಡಿಯೋ!
ಶ್ರೀಲಂಕಾದ ಹಿರಿಯ ಆಟಗಾರರು ಪಾಕ್ ಪ್ರವಾಸ ಕೈಗೊಳ್ಳದಿರುವ ನಿರ್ಧಾರದ ಹಿಂದೆ ಭಾರತದ ಕೈವಾಡವಿದೆ ಎಂದು ಆರೋಪಿಸಿದ್ದ ಪಾಕ್ ಸಚಿವನ ಬಳಿಕ ಇದೀಗ ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸಹ ಭಾರತದ ವಿರುದ್ಧ ಕಿಡಿಕಾರಿದ್ದಾರೆ.

ಇಸ್ಲಾಮಾಬಾದ್: ಶ್ರೀಲಂಕಾದ ಹಿರಿಯ ಆಟಗಾರರು ಪಾಕ್ ಪ್ರವಾಸ ಕೈಗೊಳ್ಳದಿರುವ ನಿರ್ಧಾರದ ಹಿಂದೆ ಭಾರತದ ಕೈವಾಡವಿದೆ ಎಂದು ಆರೋಪಿಸಿದ್ದ ಪಾಕ್ ಸಚಿವನ ಬಳಿಕ ಇದೀಗ ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸಹ ಭಾರತದ ವಿರುದ್ಧ ಕಿಡಿಕಾರಿದ್ದಾರೆ.
ಆಫ್ರಿದಿ ಸಂದರ್ಶನವೊಂದರಲ್ಲಿ ಮಾತನಾಡಿದ್ದು ಶ್ರೀಲಂಕಾ ಆಟಗಾರರು ಪಾಕ್ ಪ್ರವಾಸ ಕೈಗೊಳ್ಳದಿರಲು ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಕಾರಣ ಎಂದು ಹೇಳಿದ್ದಾರೆ.
ಶ್ರೀಲಂಕಾ ಆಟಗಾರರನ್ನು ಪಾಕಿಸ್ತಾನದ ಪಿಎಸ್ಎಲ್ ನಲ್ಲಿ ಭಾಗವಹಿಸುವಂತೆ ನಾನು ಕೇಳಿದ್ದೆ ಆದರೆ ಅವರು ಹೇಳುವ ಪ್ರಕಾರ ಐಪಿಎಲ್ ಫ್ರಾಂಚೈಸಿಗಳು ಪಾಕಿಸ್ತಾನಕ್ಕೆ ಹೋದರೆ ನಿಮ್ಮ ಕಾಂಟ್ರಾಕ್ಟ್ ಗಳನ್ನು ಸ್ಧಗಿತಗೊಳಿಸುತ್ತೇವೆ ಎಂದು ಬೆದರಿಸುತ್ತಿದ್ದಾರೆ. ಹೀಗಾಗಿ ಪಾಕ್ ಗೆ ಬರಲು ಹಿಂದೇಟು ಹಾಕುತ್ತಿದ್ದಾರೆ ಅಂತ ಆಫ್ರಿದಿ ಆರೋಪಿಸಿದ್ದಾರೆ.
ಶ್ರೀಲಂಕಾ ಕ್ರಿಕೆಟ್ ಮಂಡಳಿ ತಮ್ಮ ಆಟಗಾರರ ಮೇಲೆ ಒತ್ತಡ ಹೇರಿ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು. ಇಲ್ಲಿಗೆ ಬಂದು ಕ್ರಿಕೆಟ್ ಆಡುವ ಆಟಗಾರರು ಪಾಕಿಸ್ತಾನ ಇತಿಹಾಸದಲ್ಲಿ ಉಳಿಯಲಿದ್ದಾರೆ ಎಂದು ಆಫ್ರಿದಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


