ಕ್ರಿಕೆಟ್

ಹೊರದಬ್ಬಿಸಿಕೊಳ್ಳುವ ಮೊದಲೇ ಎಂಎಸ್ ಧೋನಿ ನಿವೃತ್ತಿ ಘೋಷಿಸಲಿ: ಸುನಿಲ್ ಗವಾಸ್ಕರ್

ಉತ್ತುಂಗದಲ್ಲಿರುವಾಗಲೇ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ವೃತ್ತಿ ಬದುಕಿಗೆ ವಿದಾಯ ಘೋಷಿಸುವುದು ಸೂಕ್ತ. ಇಲ್ಲದಿದ್ದರೆ ಹೀನಾಯವಾಗಿ ಹೊರತಳ್ಳುವುದನ್ನು ನೋಡಬೇಕಾಗುತ್ತದೆ ಎಂದು ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಹೊರದಬ್ಬಿಸಿಕೊಳ್ಳುವ ಮೊದಲೇ ಎಂಎಸ್ ಧೋನಿ ನಿವೃತ್ತಿ ಘೋಷಿಸಲಿ: ಸುನಿಲ್ ಗವಾಸ್ಕರ್
ಎಂಎಸ್ ಧೋನಿ-ಸುನಿಲ್ ಗವಾಸ್ಕರ್
Published On :

ನವದೆಹಲಿ: ಉತ್ತುಂಗದಲ್ಲಿರುವಾಗಲೇ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ವೃತ್ತಿ ಬದುಕಿಗೆ ವಿದಾಯ ಘೋಷಿಸುವುದು ಸೂಕ್ತ. ಇಲ್ಲದಿದ್ದರೆ ಹೀನಾಯವಾಗಿ ಹೊರತಳ್ಳುವುದನ್ನು ನೋಡಬೇಕಾಗುತ್ತದೆ ಎಂದು ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಎಂಎಸ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳುವ ಸಮಯ ಬಂದಿದೆ. ಸದ್ಯ ಭಾರತೀಯ ಕ್ರಿಕೆಟ್ ವಲಯದಲ್ಲಿ ಧೋನಿ ಪಾತ್ರ ಮುಂದುವರಿಕೆಯ ಬಗ್ಗೆ ಚರ್ಚೆಗಳಾಗುತ್ತಿರುವ ಸಂದರ್ಭ ಬಂದಿದೆ. ಇನ್ನು 2019ರ ಏಕದಿನ ವಿಶ್ವಕಪ್ ನ ಸೆಮಿಫೈನಲ್ ಪಂದ್ಯದ ಬಳಿಕ ಧೋನಿ ಒಂದೇ ಒಂದು ಪಂದ್ಯವನ್ನಾಡಿಲ್ಲ. 

ಭಾರತಕ್ಕೆ ಎರಡನೇ ವಿಶ್ವಕಪ್ ಗೆಲ್ಲಿಸಿಕೊಟ್ಟ ಎಂಎಸ್ ಧೋನಿ ಅವರು ಗೌರವಾನ್ವಿತವಾಗಿ ತಂಡದಿಂದ ನಿರ್ಗಮಿಸುವಂತಾಗಬೇಕು. ಪ್ರತಿಯೊಬ್ಬರು ತಮ್ಮ ಬದುಕಿನಲ್ಲಿ ಹೆಚ್ಚು ಉಪಯೋಗ ಅರ್ಹ ಅವಧಿಯನ್ನು ಹೊಂದಿರುತ್ತಾರೆ. ಧೋನಿ ಅವರ ಕುರಿತು ಇರುವ ಅಪಾರವಾದ ಗೌರವದೊಂದಿಗೆ ನಿವೃತ್ತಿ ಘೋಷಿಸುವುದು ಉತ್ತಮ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.