ತ್ರಿಕೋನ ಸರಣಿ ಫೈನಲ್‍ಗೆ ರಶೀದ್ ಖಾನ್ ಅನುಮಾನ
ಬಾಂಗ್ಲಾದೇಶ ವಿರುದ್ಧದ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಮಂಡಿರಜ್ಜು(ಸ್ನಾಯುಸೆಳೆತ) ಗಾಯಕ್ಕೆ ಒಳಗಾಗಿರುವ ಅಫ್ಘಾನಿಸ್ತಾನ ತಂಡದ ನಾಯಕ ರಶೀದ್ ಖಾನ್ ಅವರು ತ್ರಿಕೋನ ಸರಣಿಯ ಫೈನಲ್ ಹಣಾಹಣಿಗೆ ಆಡುವುದು ಬಹುತೇಕ ಅನುಮಾನ ಎಂದು ಹೇಳಲಾಗುತ್ತಿದೆ.

ದುಬೈ: ಬಾಂಗ್ಲಾದೇಶ ವಿರುದ್ಧದ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಮಂಡಿರಜ್ಜು(ಸ್ನಾಯುಸೆಳೆತ) ಗಾಯಕ್ಕೆ ಒಳಗಾಗಿರುವ ಅಫ್ಘಾನಿಸ್ತಾನ ತಂಡದ ನಾಯಕ ರಶೀದ್ ಖಾನ್ ಅವರು ತ್ರಿಕೋನ ಸರಣಿಯ ಫೈನಲ್ ಹಣಾಹಣಿಗೆ ಆಡುವುದು ಬಹುತೇಕ ಅನುಮಾನ ಎಂದು ಹೇಳಲಾಗುತ್ತಿದೆ.
ಎಡಗಾಲು ಮಂಡಿರಜ್ಜು ಗಾಯಕ್ಕೆ ಒಳಗಾಗಿರುವ ರಶೀದ್ ಖಾನ್ ಸಂಪೂರ್ಣ ಗುಣಮುಖರಾಗಲು ಇನ್ನೂ ಎರಡು ಮೂರು ದಿನಗಳ ಅಗತ್ಯವಿದೆ ಎಂದು ತಂಡದ ವ್ಯವಸ್ಥಾಪಕ ನಾಜೀಮ್ ಜಾರ್ ಅಬ್ದೂರ್ ಝಾಯ್ ಹೇಳಿದ್ದಾರೆ.
"ತ್ರಿಕೋನ ಸರಣಿಯ ಫೈನಲ್‍ಗೆ ಅವರು ಲಭ್ಯರಾಗುವ ಬಗ್ಗೆ ಇನ್ನೂ ಯಾವುದೇ ಸ್ಪಷ್ಟತೆಯಿಲ್ಲ. ಮುಂದೇನಾಗಲಿದೆ ಎಂದು ಕಾದು ನೋಡಬೇಕಾಗಿದೆ. ಅವರಿನ್ನೂ ಗುಣಮುಖರಾಗಲು ಎರಡರಿಂದ ಮೂರು ದಿನಗಳ ಅಗತ್ಯವಿದೆ ಎಂದು ಅವರು ಹೇಳಿರುವುದನ್ನು ಐಸಿಸಿ ವರದಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


