ಕ್ರಿಕೆಟ್

ಟೀಂ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಶೊಯೆಬ್ ಮಲ್ಲಿಕ್ ದಾಖಲೆ ಮುರಿದ ಮಿಲ್ಲರ್!

ಬೆಂಗಳೂರು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ಡೇವಿಡ್ ಮಿಲ್ಲರ್ ಚುಟುಕು ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ಕ್ಯಾಚ್ ಹಿಡಿದ ಶೊಯೆಬ್ ಮಲ್ಲಿಕ್ ಅವರ ದಾಖಲೆಯನ್ನು ಸರಿ ಗಟ್ಟಿದರು.

ಟೀಂ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಶೊಯೆಬ್ ಮಲ್ಲಿಕ್ ದಾಖಲೆ ಮುರಿದ ಮಿಲ್ಲರ್!
ಡೇವಿಡ್ ಮಿಲ್ಲರ್-ಕೊಹ್ಲಿ
Published On :

ಬೆಂಗಳೂರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ಡೇವಿಡ್ ಮಿಲ್ಲರ್ ಚುಟುಕು ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ಕ್ಯಾಚ್ ಹಿಡಿದ ಶೊಯೆಬ್ ಮಲ್ಲಿಕ್ ಅವರ ದಾಖಲೆಯನ್ನು ಸರಿ ಗಟ್ಟಿದರು.

ಭಾನುವಾರ ನಡದ ಪಂದ್ಯದಲ್ಲಿ ಭಾರತ ನೀಡಿದ್ದ 135 ರನ್ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ 16.5 ಓವರ್ ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 140 ರನ್ ಗಳಿಸಿ ಮೂರು ಪಂದ್ಯಗಳ ಟಿ-20 ಸರಣಿಯನ್ನು ಸಮಬಲ ಸಾಧಿಸಿತು. ಈ ಪಂದ್ಯದ ಪ್ರಥಮ ಇನಿಂಗ್ಸ್ ನಲ್ಲಿ ಹಾರ್ದಿಕ್ ಪಾಂಡ್ಯ ಅವರ ಕ್ಯಾಚ್ ಅನ್ನು ಬೌಂಡರಿ ಲೈನ್ ಬಳಿ ಡೇವಿಡ್ ಮಿಲ್ಲರ್ ಹಿಡಿಯುವ ಮೂಲಕ 50 ಕ್ಯಾಚ್ ಗಳನ್ನು 72 ಪಂದ್ಯಗಳಿಂದ ಪೂರೈಸಿದರು. ಪಾಕಿಸ್ತಾನ ತಂಡದ ಶೊಯೆಬ್ ಮಲ್ಲಿನ್ 111 ಪಂದ್ಯಳಿಂದ 72 ಕ್ಯಾಚ್ ಗಳನ್ನು ಹಿಡಿದಿದ್ದಾರೆ.

ದಕ್ಷಿಣ ಆಫ್ರಿಕಾ ತಂಡದ ಮಾಜಿ ನಾಯಕ ಎ.ಬಿ ಡೆವಿಲಿಯರ್ಸ್ 44 ಕ್ಯಾಚ್ ಹಾಗೂ ನ್ಯೂಜಿಲೆಂಡ್ ತಂಡದ ರಾಸ್ ಟೇಲರ್ 44 ಹಾಗೂ ಭಾರತದ ಸುರೇಶ್ ರೈನಾ 42 ಕ್ಯಾಚ್ ಹಿಡಿದು ನಂತರದ ಸ್ಥಾನಗಳಲ್ಲಿ ಇದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.