ಚೆಂದುಳ್ಳಿ ಚೆಲುವೆ, ಇಂಗ್ಲೆಂಡ್ ಆಟಗಾರ್ತಿ ಸಾರಾ ಟೇಲರ್ ಕ್ರಿಕೆಟ್‌ಗೆ ವಿದಾಯ
ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಸಾರಾ ಟೇಲರ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ.

ಲಂಡನ್: ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಸಾರಾ ಟೇಲರ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ.
13 ವರ್ಷಗಳ ಕಾಲ ಕ್ರಿಕೆಟ್ ವೃತ್ತಿ ಜೀವನ ಸವೆಸಿರುವ ಅವರು ಅದ್ಭುತ ಬ್ಯಾಾಟ್ಸ್‌ವುಮೆನ್ ಹಾಗೂ ಕೌಶಲಭರಿತ ವಿಕೆಟ್ ಕೀಪರ್ ಆಗಿದ್ದಾರೆ. ಅಲ್ಲದೇ ವಿಶ್ವಕಪ್ ಹಾಗೂ ಮಹಿಳಾ ಆ್ಯಷಸ್ ಟ್ರೋಫಿ ವಿಜೇತ ತಂಡದಲ್ಲಿದ್ದರು.
ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಎರಡನೇ ಅತಿ ಹೆಚ್ಚು ರನ್ ದಾಖಲಿಸಿದ ಇಂಗ್ಲೆಂಡ್‌ನ ಎರಡನೇ ಆಟಗಾರ್ತಿಯಾಗಿದ್ದಾರೆ. ಟೆಸ್ಟ್, ಏಕದಿನ ಹಾಗೂ ಟಿ-20 ಕ್ರಿಕೆಟ್‌ನಲ್ಲಿ ವಿಕೆಟ್ ಹಿಂದೆ 232 ಮಂದಿಯನ್ನು ಔಟ್ ಮಾಡಿದ್ದರು.
ಇತ್ತೀಚಿಗೆ ಅವರು ಖಿನ್ನತೆಗೆ ಒಳಗಾಗಿದ್ದಾರೆ. ಹಾಗಾಗಿ ಅವರು ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಇದು ನನ್ನ ಕಠಿಣ ನಿರ್ಧಾರವಾಗಿದ್ದು, ಸರಿಯಾದ ಸಮಯದಲ್ಲಿ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದೇನೆ ಎಂದು ಎನಿಸುತ್ತಿದೆ. ನನ್ನ ಕ್ರಿಕೆಟ್ ವೃತ್ತಿ ಜೀವನದಲ್ಲಿ ಸಹ ಆಟಗಾರ್ತಿಯರು, ಇಂಗ್ಲೆಂಡ್ ಕ್ರಿಕೆಟ್ ಮಂಡಳಿ, ಪ್ರೋತ್ಸಾಹಿಗಳು ಹಾಗೂ ಸ್ನೇಹಿತರು ಎಂದೂ ನನಗೆ ಬೇಸರ ಆಗುವ ರೀತಿ ನಡೆದುಕೊಂಡಿಲ್ಲ ಎಂದು ಸಾರಾ ಟೇಲರ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


